ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇಂದು ಬೆಂಗಳೂರಿಗೆ ಆಗಮಿಸಲಿದ್ದಾರೆ.ಈ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು ಮಾಹಿತಿ ನೀಡಿದ್ದಾರೆ. ಅಮಿತ್ ಶಾ ಅವರು ತಮಿಳುನಾಡಿನಿಂದ ನಗರಕ್ಕೆ ಭೇಟಿ ನೀಡಲಿದ್ದಾರೆ.
ಅಲ್ಲಿಂದ ಆಸ್ಪತ್ರೆ ಉದ್ಘಾಟನೆಗಾಗಿ ಬೆಂಗಳೂರಿಗೆ ಆಗಮಿಸಲಿದ್ದಾರೆ ಎಂದು ಹೇಳಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಾರ್ಚ್ 7 ರಂದು ಕರ್ನಾಟಕಕ್ಕೆ ಭೇಟಿ ನೀಡಲಿದ್ದಾರೆ. ಅವರು ತಮಿಳುನಾಡಿನಿಂದ ಬೆಂಗಳೂರಿಗೆ ಬರುತ್ತಿದ್ದಾರೆ.
ಅವರು ನೆಲಮಂಗಲದಲ್ಲಿ ವಿಶ್ವತೀರ್ಥ ಮಹಾಸ್ವಾಮಿಗಳು ಸ್ಥಾಪಿಸಿದ ಆಸ್ಪತ್ರೆಯನ್ನು ಉದ್ಘಾಟಿಸಲಿದ್ದಾರೆ ಎಂದು ತಿಳಿಸಿದ್ದಾರೆ.ಅಮಿತ್ ಶಾ ಅವರು ಯಾವುದೇ ರಾಜಕೀಯ ಕಾರ್ಯಕ್ರಮಕ್ಕಾಗಿ ಇಲ್ಲಿಗೆ ಬರುತ್ತಿಲ್ಲ ಎಂದು ಇದೇ ವೇಳೆ ವಿಜಯೇಂದ್ರ ಸ್ಪಷ್ಟಪಡಿಸಿದ್ದಾರೆ.




