Ad imageAd image

ಕೇಂದ್ರ ಸಚಿವ ಕುಮಾರಸ್ವಾಮಿ ಮೂಗಿನಲ್ಲಿ ರಕ್ತಸ್ರಾವ : ಆಸ್ಪತ್ರೆಗೆ ದಾಖಲು 

Bharath Vaibhav
ಕೇಂದ್ರ ಸಚಿವ ಕುಮಾರಸ್ವಾಮಿ ಮೂಗಿನಲ್ಲಿ ರಕ್ತಸ್ರಾವ : ಆಸ್ಪತ್ರೆಗೆ ದಾಖಲು 
WhatsApp Group Join Now
Telegram Group Join Now

ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರ ಮೂಗಿನಲ್ಲಿ ರಕ್ತಸ್ರಾವ ಉಂಟಾಗಿದೆ. ಬಿಜೆಪಿ, ಜೆಡಿಎಸ್ ನಾಯಕರ ಸಭೆಯ ಬಳಿಕ ಸುದ್ದಿಗೋಷ್ಠಿ ನಡೆಸುವ ವೇಳೆ ಕುಮಾರಸ್ವಾಮಿ ಅವರ ಮೂಗಿನಲ್ಲಿ ರಕ್ತಸ್ರಾವ ಉಂಟಾಗಿದೆ.ಇದರಿಂದಾಗಿ ಸುದ್ದಿಗೋಷ್ಠಿಯನ್ನು ಮೊಟಕುಗೊಳಿಸಿದ ಅವರು ಸ್ಥಳದಿಂದ ತೆರಳಿದ್ದಾರೆ.

ನಿರಂತರವಾಗಿ ಅವರ ಮೂಗಿನಿಂದ ರಕ್ತ ಸೋರಿಕೆಯಾಗಿದೆ. ಇದೇ ವೇಳೆ ಕುಮಾರಸ್ವಾಮಿ ಅವರ ಪಕ್ಕದಲ್ಲಿ ನಿಖಿಲ್ ಕುಮಾರಸ್ವಾಮಿ, ಯಡಿಯೂರಪ್ಪ ಅವರು ನಿಂತಿದ್ದರು.

ರಾಜ್ಯ ಸರ್ಕಾರದ ಅಕ್ರಮಗಳ ವಿರುದ್ಧ ಹೋರಾಟದ ಬಗ್ಗೆ ಸಭೆ ನಡೆಸಿದ ನಂತರ ಈ ಘಟನೆ ನಡೆದಿದ್ದು, ತಕ್ಷಣವೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡುವಾಗ ಅವರ ಮೂಗಿನಿಂದ ರಕ್ತ ಸೋರಿ ಅಂಗಿ ಮೇಲೆ ಬಿದ್ದಿದೆ. ಇದನ್ನು ಗಮನಿಸಿದ ಕೂಡಲೇ ಕುಮಾರಸ್ವಾಮಿ ಕರವಸ್ತ್ರದಿಂದ ಒರೆಸಿಕೊಂಡಿದ್ದು, ನಿರಂತರವಾಗಿ ಮೂಗಿನಿಂದ ರಕ್ತ ಸೋರಿದೆ. ರಕ್ತಸ್ರಾವ ಹೆಚ್ಚಾಗುತ್ತಿದ್ದಂತೆ ಅಲ್ಲಿದ್ದ ಆಪ್ತರು ಜಯನಗರದ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ.

 

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!