ಬೆಂಗಳೂರು:- ಪೀಣ್ಯ ದಾಸರಹಳ್ಳಿ ರಾಜ್ಯ ಕಾಂಗ್ರೆಸ್ ಸರ್ಕಾರದ ಮುಖ್ಯ ಮಂತ್ರಿ ಸಿದ್ದರಾಮಯ್ಯ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಇಬ್ಬರು ವಿರೋಧ ಪಕ್ಷದ ನಾಯಕರ ಮೇಲೆ ಇಲ್ಲದಂದು ಆರೋಪಿ ನಾಯಕರ ವೈಕ್ತಿತ್ವಕ್ಕೆ ಧಕ್ಕೆ ತರುವ ಹುನ್ನಾರ ಮಾಡುತ್ತಿರುವುದು ಸರಿಯಲ್ಲ ಎಂದು ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಎನ್ ಡಿಎ ಸಂಸದೆ ಹಾಗೂ ಕೇಂದ್ರ ನೂತನ ಸಚಿವೆ ಶೋಭಾ ಕರಂದ್ಲಾಜೆ ರಾಜ್ಯ ಸರ್ಕಾರಕ್ಕೆ ತರಾಟೆಗೆ ತೆಗೆದುಕೊಂಡರು.
ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಮಲ್ಲಸಂದ್ರದಲ್ಲಿರುವ ಕೆಂಪೇಗೌಡ ಉದ್ಯಾನದ ಡಾ. ಶಿವಕುಮಾರ ಸ್ವಾಮೀಜಿ ಸಭಾಂಗಣದಲ್ಲಿ ಆಯೋಜಿಸಿದ್ದ ಅಭಿನಂದನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಅಭಿನಂದನೆ ಸ್ವೀಕರಿಸಿ ಅವರು ಮಾತನಾಡಿದರು.
ಜೆಡಿಎಸ್ ಬಿಜೆಪಿ ಪಕ್ಷಗಳ ಮುಖಂಡರ ಮಹಿಳೆಯರ ಕಾರ್ಯಕರ್ತರ ಪರಿಶ್ರಮದಿಂದ ನನಗೆ ಅತಿ ಹೆಚ್ಚು ಮತಗಳು ಕೊಡಿಸಿದ್ದಿರಿ ಅದರಿಂದಲೇ ಇವತ್ತು ಕೇಂದ್ರ ಮಂತ್ರಿಯಾಗಿದ್ದೇನೆ.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಯೋಜನೆಗಳಾದ ಗ್ಯಾರಂಟಿ ಗೋಳನ್ನು ಜನರಿಗೆ ನೀಡಲು ರಾಜ್ಯ ಸರ್ಕಾರದಲ್ಲಿ ಹಣ ಇಲ್ಲದಂತಾಗಿದೆ ಆ ಹಿನ್ನೆಲೆಯಲ್ಲಿ ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ಮಾಡಿದೆ ಕಳೆದ ಲೋಕಸಭಾ ಚುನಾವಣೆಯಲ್ಲಿ ಜನರು ಕಾಂಗ್ರೆಸ್ಗೆ ಮತ ಹಾಕಿಲ್ಲಾ ಆ ಕೋಪದಿಂದ ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ಮಾಡಿದ ಸಿದ್ದರಾಮಯ್ಯನ ಸರ್ಕಾರ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆರೋಪಿಸಿದರು.ಕ್ಷೇತ್ರದ ಶಾಸಕ ಎಸ್ ಮುನಿರಾಜು ಮಾತನಾಡಿ ಕಾಂಗ್ರೆಸ್ ಸರ್ಕಾರ ಬಂದ ಮೇಲೆ ನಮ್ಮ ಕ್ಷೇತ್ರಕ್ಕೆ ಒಂದು ನಯಾಪೈಸೆ ಅನುದಾನ ಕೊಟ್ಟಿಲ್ಲಾ ಕಾಂಗ್ರೆಸ್ ಸರ್ಕಾರ ದ್ವೇಷದ ರಾಜಕಾರಣ ಮಾಡುವುದು ಸರಿಯಲ್ಲ ಕ್ಷೇತ್ರಕ್ಕೆ ಕುಡಿಯುವ ನೀರಿಗಾಗಿ ಸರ್ಕಾರಕ್ಕೆ ಸಾಕಷ್ಟು ಸಲ ಪತ್ರ ಬರೆದು ಉಪಯೋಗ ಆಗಿಲ್ಲಾ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಹರೀಶ್, ಕ್ಷೇತ್ರದ ಬಿಜೆಪಿ ಅಧ್ಯಕ್ಷ ಸೋಮಶೇಖರ್, ಜೆಡಿಎಸ್ ಅಧ್ಯಕ್ಷ ಮುನಿಸ್ವಾಮಿ, ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಮಾಜಿ ನಗರಸಭಾ ಅಧ್ಯಕ್ಷ ಅಂದಾನಪ್ಪ,ಮಾಜಿ ನಗರ ಸಭಾ ಸದಸ್ಯ ಶಿವಣ್ಣ, ಮಾಜಿ ಪಾಲಿಕೆ ಸದಸ್ಯರಾದ ತಿಮ್ಮನಂಜಯ್ಯ, ಉಮಾದೇವಿ ನಾಗರಾಜ್, ಬಿಜೆಪಿ ಹಿರಿಯ ನಾಯಕಿ ಭಾಗ್ಯಮ್ಮ ಬಾಗಲಗುಂಟೆ, ಜೆಡಿಎಸ್ ಮುಖಂಡರಾದ ನರಸಿಂಹಮೂರ್ತಿ(ಸಿಂಹ), ಮಲ್ಲೇಶ್ ಗೌಡ್ರು, ಜಯಣ್ಣ, ಗೋವಿಂದಪ್ಪ, ಕೃಷ್ಣಯ್ಯ, ನಿಸರ್ಗ ಕೆಂಪರಾಜು, ನರಸಿಂಹಮೂರ್ತಿ ಮಂಗಳ ವಾಟರ್, ದಿನೇಶ್, ಸೇರಿದಂತೆ ಬಿಜೆಪಿ , ಜೆಡಿಎಸ್ ಮುಖಂಡರು ಮಹಿಳೆಯರು ಕಾರ್ಯಕರ್ತರು ಮುಂತಾದವರು ಇದ್ದರು.
ವರದಿ:-ಅಯ್ಯಣ್ಣ ಮಾಸ್ಟರ್