ಬೆಳಗಾವಿ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ ವತಿಯಿಂದ ಬೆಳಗಾವಿಯ ಟಿಳಕವಾಡಿಯ ವೀರಸೌಧ ಸಾರ್ವಜನಿಕ ಉದ್ಯಾನವನದಲ್ಲಿ ನಿರ್ಮಿಸಲಾಗಿರುವ ಮಹಾತ್ಮ ಗಾಂಧೀಜಿಯವರ ಪುತ್ಥಳಿಯನ್ನು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿಗಳು ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಅವರು ಅನಾವರಣಗೊಳಿಸಿದರು. ಈ ವೇಳೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಉಪಸ್ಥಿತರಿದ್ದರು.
1924ರಲ್ಲಿ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ ಜರುಗಿದ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವದ ಅಂಗವಾಗಿ ಮಹಾತ್ಮ ಗಾಂಧೀಜಿಯವರ ಪುತ್ಥಳಿಯನ್ನು ನಿರ್ಮಿಸಲಾಗಿದೆ. ಇದೇ ವೇಳೆ ಹೊಸ ಫೋಟೋ ಗ್ಯಾಲರಿ ಲೋಕಾರ್ಪಣೆ ಮಾಡಲಾಯಿತು.
ವರದಿ : ಪ್ರತೀಕ ಚಿಟಗಿ