ಸೇಡಂ: ಸೇಡಂ ತಾಲ್ಲೂಕಿನ ಮುಧೋಳ್ ಪೊಲೀಸ್ ಠಾಣೆಯಲ್ಲಿ ಸಿಪಿಐ ದೌಲತ ಎನ್. ಕೆ ಅವರ ನೇತೃತ್ವದಲ್ಲಿ ಮೊಹರಂ ಹಬ್ಬದ ಪ್ರಯುಕ್ತ ಶಾಂತಿ ಸಭೆ ಮತ್ತು ವಿಶ್ವ ಮಾದಕ ದ್ರವ್ಯ ವಿರೋಧಿ ದಿನಾಚರಣೆಯ ನಿಮಿತ್ಯ ಸಾರ್ವಜನಿಕರಿಗೆ ಮಾಹಿತಿ ನೀಡಿದರು.
ಉತ್ತರ ಕರ್ನಾಟಕದ ಪ್ರೀತಿಯ ಹಬ್ಬದವಾದ ಮೊಹರಂ ಹಬ್ಬವನ್ನು ಹಿಂದೂ ಮುಸ್ಲಿಂ ಭೇದಭಾವವಿಲ್ಲದೆ ಆಚರಣೆ ಮಾಡಲಾಗುತ್ತದೆ.
ಮುಧೋಳ್ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಗ್ರಾಮಗಳಲ್ಲಿ ಮೊಹರಂ ಹಬ್ಬವನ್ನು ಶಾಂತರಿತಿಯಾಗಿ ಆಚರಣೆ ಮಾಡಬೇಕು ಇಲ್ಲವಾದಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಸೂಚಿಸಿದರು.
ಈ ಸಂದರ್ಭದಲ್ಲಿ ಮುಧೋಳ್ ಪೊಲೀಸ್ ಠಾಣೆಯ ಸಿಬ್ಬಂದಿವರ್ಗದವರು ಮತ್ತು ಸುತ್ತಮುತ್ತಲಿನ ಗ್ರಾಮಸ್ಥರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ವರದಿ: ವೆಂಕಟಪ್ಪ ಕೆ ಸುಗ್ಗಾಲ್




