ತುರುವೇಕೆರೆ: ಜಾತ್ಯಾತೀತ ಜನತಾದಳ ಪಕ್ಷದ ಸಾಮಾಜಿಕ ಜಾಲತಾಣ ವಿಭಾಗಕ್ಕೆ ರಾಜ್ಯ ಜಂಟಿ ಕಾರ್ಯದರ್ಶಿಯನ್ನಾಗಿ ತುರುವೇಕೆರೆ ತಾಲ್ಲೂಕಿನ ವಡ್ಡೇರಹಳ್ಳಿಯ ಯೋಗೀಶ್ ಕುಮಾರ್ ವಿ.ಪಿ. ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಸಾಮಾಜಿಕ ಜಾಲತಾಣ ವಿಭಾಗದ ರಾಜ್ಯಾಧ್ಯಕ್ಷ ಹೆಚ್.ಎಸ್.ಚಂದನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಾಮಾಜಿಕ ಜಾಲತಾಣದ ಜಂಟಿ ಕಾರ್ಯದರ್ಶಿಯಾಗಿ ಅಧಿಕಾರ ಸ್ವೀಕಾರ ಪತ್ರವನ್ನು ಕೇಂದ್ರ ಸಚಿವರೂ, ಮಾಜಿ ಮುಖ್ಯಮಂತ್ರಿ, ಪಕ್ಷದ ರಾಜ್ಯಾಧ್ಯಕ್ಷರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಯೋಗೀಶ ಕುಮಾರ್ ಅವರಿಗೆ ನೀಡಿ ಶುಭ ಹಾರೈಸಿದ್ದಾರೆ.
ಪಕ್ಷದ ತತ್ವ ಸಿದ್ದಾಂತಗಳಿಗೆ ಬದ್ಧರಾಗಿ, ಜೆಡಿಎಸ್ ಪಕ್ಷದ ಸಾಮಾಜಿಕ ಜಾಲತಾಣ ವಿಭಾಗವನ್ನು ಪರಿಣಾಮಕಾರಿಯಾಗಿ ಸಂಘಟಿಸಿ, ಬಲವರ್ಧನೆಗೊಳಿಸುವ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗಬೇಕೆಂದು ಚಂದನ್ ತಿಳಿಸಿದ್ದಾರೆ.
ವರದಿ: ಗಿರೀಶ್ ಕೆ ಭಟ್