Join The Telegram | Join The WhatsApp |
ತಿರುಪತಿ: ವಿಶ್ವದ ಶ್ರೀಮಂತ ದೇವಾಲಯ ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಅಪಾರ ಸಂಖ್ಯೆಯ ಭಕ್ತರು ಭೇಟಿ ನೀಡುತ್ತಾರೆ. ಹೀಗೆ ಬರುವ ಭಕ್ತರು ತಮ್ಮ ಇಷ್ಟಾರ್ಥ ಸಿದ್ಧಿಗಾಗಿ ಹರಕೆ ಕಾಣಿಕೆ ಸಲ್ಲಿಸುತ್ತಾರೆ.
ತಿರುಮಲ ವೆಂಕಟೇಶ್ವರ ದೇಗುಲದಲ್ಲಿ ದಾಖಲೆಯ ಪ್ರಮಾಣದ ಕಾಣಿಕೆ ಸಂಗ್ರಹವಾಗುತ್ತದೆ.
ಅದರಲ್ಲೂ ವೈಕುಂಠ ಏಕಾದಶಿ ದಿನದಂದು ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಅಪಾರ ಸಂಖ್ಯೆಯ ಭಕ್ತರು ಭೇಟಿ ನೀಡಿದ್ದು, ಒಂದೇ ದಿನ 7.68 ಕೋಟಿ ರೂ. ಸಂಗ್ರಹವಾಗಿದೆ.
ಈ ಬಾರಿ ವೈಕುಂಠ ಏಕಾದಶಿಯಂದು ತಿರುಮಲ ದೇವಸ್ಥಾನದ ಹುಂಡಿಯಲ್ಲಿ ದಾಖಲೆಯ 7.68 ಕೋಟಿ ರೂ ಕಾಣಿಕೆ ಸಂಗ್ರಹವಾಗಿದೆ. 2022 ರ ಅಕ್ಟೋಬರ್ 23 ರಂದು 6.31 ಕೋಟಿ ರೂ. ಸಂಗ್ರಹವಾಗಿತ್ತು.
Join The Telegram | Join The WhatsApp |