ಬೆಂಗಳೂರು : ದೇಶದೆಲ್ಲೆಡೆ ವೈಕುಂಠ ಏಕಾದಶಿ ಸಂಭ್ರಮ ಮನೆ ಮಾಡಿದೆ. ವೈಕುಂಠ ಏಕಾದಶಿಯಂದು ಸ್ವರ್ಗದ ಬಾಗಿಲು ತೆರೆಯುತ್ತದೆ ಎಂಬ ನಂಬಿಕೆ ಇದ್ದು, ಭಕ್ತರು ದೇವಾಲಯಗಳಿಗೆ ತೆರಳಿ ದೇವರ ದರ್ಶನ ಪಡೆದುಕೊಂಡಿದ್ದಾರೆ.
ವರ್ಷದ ಕೊನೆಯ ವೈಕುಂಠ ಏಕಾದಶಿ ಆಚರಣೆ ನಡೆದಿದ್ದು, ವೆಂಕಟೇಶ್ವರ, ಶ್ರೀನಿವಾಸ ದೇವಾಲಯಗಳು ಸೇರಿದಂತೆ ಬಹುತೇಕ ದೇವಾಲಯಗಳಲ್ಲಿ ವಿಶೇಷ ಪೂಜೆ, ಅಲಂಕಾರ ಮಾಡಲಾಗಿದೆ.ಅಪಾರ ಭಕ್ತರು ದರ್ಶನ ಪಡೆದುಕೊಂಡಿದ್ದಾರೆ.
ತಿರುಪತಿ ವೆಂಕಟೇಶ್ವರನಿಗೆ ವಿಶೇಷ ಪೂಜೆ ನೆರವೇರಿಸಲಾಗಿದ್ದು, ಗೋವಿಂದ ನಾಮ ಸ್ಮರಣೆ ಮುಗಿಲು ಮುಟ್ಟಿದೆ. ಇಂದು ವೈಕುಂಠ ದ್ವಾರ ತೆರೆಯುತ್ತದೆ ಎನ್ನುವ ನಂಬಿಕೆ ಇದೆ.
ದೇವರ ದರ್ಶನ ಮಾಡಿದರೆ ಪುಣ್ಯಪ್ರಾಪ್ತಿಯಾಗುತ್ತದೆ ಎನ್ನುವ ನಂಬಿಕೆ ಇದ್ದು, ಮಧ್ಯರಾತ್ರಿಯಿಂದಲೇ ವೈಕುಂಠ ದ್ವಾರದ ಮೂಲಕ ವೆಂಕಟೇಶ್ವರ ದರ್ಶನ ಮಾಡಲಾಗುತ್ತಿದೆ. ತಿಮ್ಮಪ್ಪನ ಸನ್ನಿಧಿಯಲ್ಲಿ ವೈಕುಂಠ ಏಕಾದಶಿ ಸಂಭ್ರಮ ಮನೆ ಮಾಡಿದೆ. ದೇಶಾದ್ಯಂತ ದೇವಾಲಯಗಳಲ್ಲಿ ವಿಶೇಷ ಪೂಜೆ ಅಲಂಕಾರ ಮಾಡಲಾಗಿದೆ. ಭಕ್ತರಿಗೆ ಪ್ರಸಾದ ವಿತರಣೆ ಮಾಡಲಾಗಿದೆ.




