ಬೆಂಗಳೂರು: ವಕೀಲೆ ಜೀವಾ ಆತ್ಮಹತ್ಯೆ ಕೇಸ್‌ಗೆ ಸಂಬಂಧಪಟ್ಟಂತೆ ಎಸ್‌ಐಟಿ ಅಧಿಕಾರಿಗಳು ಡಿವೈಎಸ್‌ಪಿ ಕನಕಲಕ್ಷ್ಮಿ ಅವರನ್ನು ಬಂಧಿಸಿದ್ದಾರೆ.
ವಕೀಲೆ ಜೀವಾ ಅವರು 2024 ನವೆಂಬರ್ 22 ರಂದು ಆತ್ಮಹತ್ಯೆ ಮಾಡಿಕೊಂಡಿದ್ದರು. ಜೀವಾ ಆತ್ಮಹತ್ಯೆಗೂ ಮುನ್ನ ಡೆತ್ ನೋಟ್ ಬರೆದಿದ್ದು, ಅದರಲ್ಲಿ ಡಿವೈಎಸ್‌ಪಿ ಕನಕಲಕ್ಷ್ಮಿ ಹೆಸರನ್ನು ಉಲ್ಲೇಖಿಸಿದ್ದರು.ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜೀವಾ ಅವರ ಸಹೋದರಿ ಬನಶಂಕರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.
ಈ ಪ್ರಕರಣವನ್ನು ನಗರ ಪೊಲೀಸ್ ಆಯುಕ್ತ ದಯಾನಂದ ಅವರು ಸಿಸಿಬಿಗೆ ವರ್ಗಾಯಿಸಿದ್ದರು. ಅತ್ತ ವಕೀಲರ ಸಂಘ ಸಿಬಿಐ ತನಿಖೆ ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು. ನಂತರ ವಿಚಾರಣೆ ನಡೆಸಿದ ಕೋರ್ಟ್ ಪ್ರತ್ಯೇಕ ಎಸ್‌ಐಟಿ ರಚಿಸಿ ತನಿಖೆ ನಡೆಸಲು ಆದೇಶಿಸಿತ್ತು.
ಇದೀಗ ಕನಕಲಕ್ಷ್ಮಿ ಅವರ ನಿರೀಕ್ಷಣಾ ಜಾಮೀನು ವಜಾ ಆಗಿರುವ ಹಿನ್ನೆಲೆ ಎಸ್‌ಐಟಿ ಅಧಿಕಾರಿಗಳು ಅವರನ್ನು ಬಂಧಿಸಿದ್ದಾರೆ.




