ಬೈಲಹೊಂಗಲ: ಬೆಳಗಾವಿ ಜಿಲ್ಲೆಯ ಕಿತ್ತೂರು ವಿಧಾನಸಭಾ ಕ್ಷೇತ್ರದ ಬೈಲಹೊಂಗಲ ತಾಲ್ಲೂಕಿನ ಭಾವಿಹಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜಕ್ಕನಾಯಕನಕೊಪ್ಪ ಗ್ರಾಮದ ವಾಲ್ಮೀಕಿ ನಗರದಲ್ಲಿ ವಾಸಿಸುತ್ತಿರುವ ಹಿಂದುಳಿದ ವರ್ಗದವರು ವಾಸಿಸುತ್ತಿರುವ ಈ ವಾಲ್ಮೀಕಿ ನಗರಕ್ಕೆ ಸಮರ್ಪಕವಾಗಿ ರಸ್ತೆ ಹಾಗೂ ಚರಂಡಿ ವ್ಯವಸ್ಥೆಯಿಲ್ಲದೇ ಇರುವ ಕಾರಣ ತುಂಬಾ ತೊಂದರೆಯಾಗುತ್ತಿದೆ. ಇನ್ನೂ ಮಳೆಗಾಲದಲ್ಲಂತೂ ಇಳಿಜಾರು ಪ್ರದೇಶವಾಗಿರುವುದರಿಂದ ಮಣ್ಣಿನ ನೀರು ತಗ್ಗು ಪ್ರದೇಶಗಳಲ್ಲಿರುವ ಮನೆಗಳಿಗೆ ಹೋಗಿ ಸಾಕಷ್ಟು ಸಮಸ್ಯೆಯಾಗುತ್ತಿದೆ.

ಇನ್ನೂ ಈ ಸಮಸ್ಯೆ ಬಗೆಹರಿಸುವಂತೆ ಪದೇ ಪದೇ ಗ್ರಾ.ಪಂ ಪಿ.ಡಿ.ಓ ಹಾಗೂ ಅಧ್ಯಕ್ಷರು ಹಾಗೂ ಸದಸ್ಯರಿಗೆ ಗಮನಕ್ಕೆ ತೆಗೆದುಕೊಂಡು ಬಂದರೂ ಸಹ ಯಾವುದೇ ರೀತಿಯ ಪ್ರಯೋಜನವಾಗಿಲ್ಲ. ಆದ್ದರಿಂದ ಇವರ ಮನವಿ ಮೇರೆಗೆ ನಮ್ಮ ನ್ಯೂಸ್ ಸಮೂಹದ ರಾಜ್ಯ ಉಪ ಸಂಪಾದಕ ಬಸವರಾಜು ಈ ಸ್ಥಳಕ್ಕೆ ಭೇಟಿಕೊಟ್ಟು ವರದಿ ತಯಾರಿಸಿ ಬೈಲಹೊಂಗಲ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು ಆದ ಮಹೇಶ್ ಹೂಲಿ ಅವರ ಗಮನಕ್ಕೆ ತೆಗೆದುಕೊಂಡು ಬಂದು ಬೆಳಕು ಚೆಲ್ಲುವ ಕೆಲಸ ಮಾಡಿದ್ದಾರೆ. ಇನ್ನಾದರೂ ಈ ವಾಲ್ಮೀಕಿನಗರಕ್ಕೆ ರಸ್ತೆ ಮತ್ತು ಚರಂಡಿ ಬಾಗ್ಯ ಸಿಗುವುದೇ ಎಂಬುದನ್ನು ಕಾದುನೋಡಬೇಕಿದೆ.
ವರದಿ: ಬಸವರಾಜು




