ಬೆಂಗಳೂರು: ಮಹರ್ಷಿ ವಾಲ್ಮೀಕಿ ನಿಗಮದ ಹಗರಣ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ಬಿ.ನಾಗೇಂದ್ರಗೆ ಬಿಗ್ ರಿಲೀಫ್ ಎನ್ನುವಂತೆ ಕೋರ್ಟ್ ನಿರೀಕ್ಷಣಾ ಜಾಮೀನು ನೀಡಿದೆ.
ಇಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಸಲ್ಲಿಸಲಾಗಿದ್ದಂತ ಜಾಮೀನು ಅರ್ಜಿಯನ್ನು ವಿಚಾರಣೆ ನಡೆಸಲಾಯಿತು.
ವಾದ ಪ್ರತಿವಾದವನ್ನು ಆಲಿಸಿದಂತ ನ್ಯಾಯಾಲಯವು ಮಹರ್ಷಿ ವಾಲ್ಮೀಕಿ ನಿಗಮದ ಹಗರಣ ಕೇಸಲ್ಲಿ ಕಾಂಗ್ರೆಸ್ ಶಾಸಕ ಬಿ.ನಾಗೇಂದ್ರಗೆ ಜಾಮೀನು ಮಂಜೂರು ಮಾಡಿದೆ.




