ಬೆಂಗಳೂರು: ವಾಲ್ಮೀಕಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ. ನಾಗೇಂದ್ರ ಅವರನ್ನು ಇಡಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.
ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಬಹುಕೋಟಿ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಮಾಜಿ ಸಚಿವ ಬಿ.ನಾಗೇಂದ್ರ ಅವರ ನಿವಾಸ ಸೇರಿ ಅವರಿಗೆ ಸೇರಿದ ಸ್ಥಳಗಳಲ್ಲಿ ಸತತ 48 ಗಂಟೆಗಳ ಕಾಲ ಜಾರಿ ನಿರ್ದೇಶನಾಲಯ ಅಧಿಕಾರಿಗಳು ತಪಾಸಣೆ ನಡೆಸಿದ್ದರು. ಈ ಸಂದರ್ಭದಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ.
ಬ್ಯಾಂಕ್ ಅಧಿಕಾರಿಗಳ ಮುಂದೆ ನಾಗೇಂದ್ರ ಅವರನ್ನು ಕೂರಿಸಿ ವಿಚಾರಣೆ ನಡೆಸಲಾಗಿದ್ದು, ನಾಗೇಂದ್ರ ಅವರನ್ನು ಇಡಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.ನಾಗೇಂದ್ರ ಅವರನ್ನು ಇಡಿ ಕಚೇರಿಗೆ ಕರೆತಂದು ಅವರ ವಿಚಾರಣೆ ನಡೆಸಿ ಅಧಿಕೃತವಾಗಿ ಬಂಧಿಸುವ ಸಾಧ್ಯತೆ ಇದೆ.