ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ಅಧಿಕಾರಿಗಳು ಪ್ರಕರಣದ ಮಾಸ್ಟರ್ ಮೈಂಡ್ , ಮಾಜಿ ಸಚಿವ ನಾಗೇಂದ್ರ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಗೆ ಇಡಿ ಅಧಿಕಾರಿಗಳು ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ.
ವಾಲ್ಮೀಕಿ ನಿಗಮದಲ್ಲಿ ಅಕ್ರಮ ಪ್ರಕರಣ ಸಂಬಂಧ ಹೈಗ್ರೌಂಡ್ಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಚಾರ್ಜ್ ಶೀಟ್ ನಲ್ಲಿ ಇಡಿ ಅಧಿಕಾರಿಗಳು ನಾಗೇಂದ್ರ ಅವರನ್ನು ಪ್ರಕರಣದ ಮಾಸ್ಟರ್ ಮೈಂಡ್ ಎಂದು ಉಲ್ಲೇಖಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ರಾಜ್ಯ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮದ ಅಧೀಕ್ಷಕ ಚಂದ್ರಶೇಖರನ್.ಪಿ (52) ಆತ್ಮಹತ್ಯೆಯ ಬೆನ್ನಲ್ಲೇ ಅಕ್ರಮ ಹಣ ವರ್ಗಾವಣೆ ಪ್ರಕರಣ ಮುನ್ನೆಲೆಗೆ ಬಂದಿತ್ತು.
ಈ ಪ್ರಕರಣವನ್ನು ಮುಂದಿಟ್ಟುಕೊಂಡು ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಸಚಿವ ಬಿ. ನಾಗೇಂದ್ರ ರಾಜೀನಾಮೆಗೆ ಬಿಜೆಪಿ ಪಟ್ಟು ಹಿಡಿಯಲಾಗಿತ್ತು, ನಂತರ ನಾಗೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.ಪ್ರಕರಣದಲ್ಲಿ ಮಾಜಿ ಸಚಿವ ಬಿ. ನಾಗೇಂದ್ರ, ಶಾಸಕ ದದ್ದಲ್ ಹಾಗೂ ಪಂಪಣ್ಣ ಅವರನ್ನು ಕೂಡ ವಿಚಾರಣೆ ನಡೆಸಲಾಗಿತ್ತು.