ರಾಯಚೂರು: ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಶ್ರೀ ಪ್ರಸನ್ನಾನಂದಪುರಿ ಸ್ವಾಮೀಜಿಗೆ ಲಘು ಹೃದಯಾಘಾತ ಉಂಟಾಗಿದೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ರಾಯಚೂರಿನಲ್ಲಿ ಭಾಗವಹಿಸಿದ್ದ ವೇಳೆಯಲ್ಲಿ ರಾಜನಹಳ್ಳಿ ಮಹರ್ಷಿ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದಪುರಿ ಸ್ವಾಮೀಜಿಗೆ ಲಘು ಹೃದಯಾಘಾತವಾಗಿದೆ.ಲಿಂಗಸಗೂರು ತಾಲೂಕಿನ ಹಟ್ಟಿ ಪಟ್ಟಣದಲ್ಲಿ ನಿನ್ನೆ ಸ್ವಾಮೀಜಿ ವಾಸ್ತವ್ಯ ಹೂಡಿದ್ದರು.
ಸಮುದಾಯದ ಕಾರ್ಯಕ್ರಮ ಹಿನ್ನೆಲೆಯಲ್ಲಿ ವಾಸ್ತವ್ಯ ಹೂಡಿದ್ದ ವೇಳೆ ಲಘು ಹೃದಯಾಘಾತವಾಗಿದೆ. ಕೂಡಲೇ ರಾಯಚೂರಿನ ಖಾಸಗಿ ಆಸ್ಪತ್ರೆಗೆ ಸ್ವಾಮೀಜಿ ದಾಖಲಿಸಲಾಗಿದೆ.
ಸದ್ಯ ಚಿಕಿತ್ಸೆಗೆ ಸ್ಪಂದಿಸುತ್ತಿರುವ ವಾಲ್ಮೀಕಿ ಗುರುಪೀಠದ ಸ್ವಾಮೀಜಿ ಅವರನ್ನು ಪ್ರಾಥಮಿಕ ಚಿಕಿತ್ಸೆಯ ನಂತರ ಹೈದರಾಬಾದ್ ಅಪೊಲೋ ಆಸ್ಪತ್ರೆಗೆ ಕಳಿಸಲಾಗಿದೆ ಎನ್ನಲಾಗಿದ್ದು, ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.




