ಇಲಕಲ್ :ಇಂದು ಇಳಕಲ್ ಕಾಂಗ್ರೆಸ್ ಪಕ್ಷದ ಕಾರ್ಯಾಲಯದಲ್ಲಿ ಹುನಗುಂದ ಹಾಗೂ ಇಳಕಲ್ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಹಮ್ಮಿಕೊಂಡಿದ್ದ ಮಾಜಿ ಪ್ರಧಾನಿಗಳಾದ ಡಾ.ಮನಮೋಹನ್ ಸಿಂಗ್ ಅವರ ಶ್ರದ್ಧಾಂಜಲಿ ಸಭೆಯಲ್ಲಿ ಬಾಗಲಕೋಟೆ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷರಾದ ಶ್ರೀಮತಿ ವೀಣಾ ವಿಜಯಾನಂದ ಕಾಶಪ್ಪನವರ ಅವರು ಪಾಲ್ಗೊಂಡು ಸಿಂಗ್ ಅವರ ಜೀವನ ಸಾಧನೆಗಳನ್ನು ಸ್ಮರಿಸಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.
ಈ ಶ್ರದ್ಧಾಂಜಲಿ ಸಭೆಯಲ್ಲಿ ಇಳಕಲ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಅಬ್ದುಲ್ ರಜಾಕ್ ತಟಗಾರ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಶರಣಪ್ಪ ಆಮದಿಹಾಳ,ಅರುಣ ಬಿಜ್ಜಳ, ಹುನಗುಂದ ಬ್ಲಾಕ್ ಹಿಂದುಳಿದ ವಿಭಾಗದ ಅಧ್ಯಕ್ಷರಾದ ವಿಜಯ ಮಹಾಂತೇಶ ಗದ್ದನಕೇರಿ, ಮುಖಂಡರಾದ ಭಾಷಾಸಾಬ ಸಿಂಗನಗುತ್ತಿ, ಅಹ್ಮದ್ ಸಾಬ್ ಬಾಗವಾನ, ಶಿವಾನಂದ ಮುಚಖಂಡಿ ಸೇರಿದಂತೆ ನಗರಸಭೆ ಅಧ್ಯಕ್ಷರು ಹಾಗೂ ಸದಸ್ಯರು ಮತ್ತು ಕಾಂಗ್ರೆಸ್ ಪಕ್ಷದ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.
ವರದಿ: ದಾವಲ್ ಶೇಡಂ