Ad imageAd image

ಹೆಚ್‌ಎಸ್‌ಆರ್‌ಪಿ ಅಳವಡಿಸದ ವಾಹನಗಳಿಗೆ ಸೆ. 18ರವರೆಗೆ ದಂಡದಿಂದ ವಿನಾಯಿತಿ 

Bharath Vaibhav
ಹೆಚ್‌ಎಸ್‌ಆರ್‌ಪಿ ಅಳವಡಿಸದ ವಾಹನಗಳಿಗೆ ಸೆ. 18ರವರೆಗೆ ದಂಡದಿಂದ ವಿನಾಯಿತಿ 
WhatsApp Group Join Now
Telegram Group Join Now

ಬೆಂಗಳೂರು : ಅತಿ ಸುರಕ್ಷಿತ ನೋಂದಣಿ ಫಲಕ (ಹೆಚ್‌ಎಸ್‌ಆರ್‌ಪಿ) ಅಳವಡಿಕೆಗೆ ಸಂಬಂಧಿಸಿ ಹೈಕೋರ್ಟ್‌ನಲ್ಲಿ ಸೆಪ್ಟೆಂಬರ್‌ 18 ರಂದು ವಿಚಾರಣೆ ನಡೆಯಲಿದ್ದು, ಅಲ್ಲಿಯವರೆಗೆ ದಂಡ ವಿಧಿಸದಿರಲು ಸಾರಿಗೆ ಇಲಾಖೆ ನಿರ್ಧರಿಸಿದೆ.

ʼಹೆಚ್‌ಎಸ್‌ಆರ್‌ಪಿ ಅಳವಡಿಕೆಯ ಮೂರು ತಿಂಗಳ ಅವಧಿ ಈಗ ಮುಗಿದಿದೆ. ಸೆಪ್ಟೆಂಬರ್‌ 18ಕ್ಕೆ ಹೈಕೋರ್ಟ್‌ ನೀಡುವ ಆದೇಶ ಆಧರಿಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು. ಅಲ್ಲಿಯವರೆಗೆ ಬಲವಂತದ ಕ್ರಮ ಇರುವುದಿಲ್ಲ ಎಂದು ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

HSRP ಅಳವಡಿಸಿದ ವಾಹನಗಳಿಗೆ ಸೆ. 16ರಿಂದ ದಂಡ ವಿಧಿಸಲಾಗುವುದು ಎಂದು ಹೇಳಲಾಗಿತ್ತು. ಆದರೆ, ಈ ಸಂಬಂಧ ಸಲ್ಲಿಕೆಯಾದ ಅರ್ಜಿ ವಿಚಾರಣೆ ಸೆ. 18ರಂದು ಹೈಕೋರ್ಟ್ ನಲ್ಲಿ ನಡೆಯಲಿದೆ. ಹೀಗಾಗಿ ಸದ್ಯಕ್ಕೆ ಸಾರಿಗೆ ಇಲಾಖೆ ಅಧಿಕಾರಿಗಳು ದಂಡ ವಿಧಿಸುವ ಬಗ್ಗೆ ತೀರ್ಮಾನಿಸಿಲ್ಲ.

ವಿಚಾರಣೆಯ ನಂತರ ದಂಡ ವಿಧಿಸಬೇಕೆ ಅಥವಾ ಗಡುವು ವಿಸ್ತರಿಸಬೇಕೆ ಎನ್ನುವ ನಿರ್ಧಾರ ಕೈಗೊಳ್ಳಲಾಗುವುದು. 2019ರ ಏಪ್ರಿಲ್ 1ಕ್ಕಿಂತ ಮೊದಲು ನೋಂದಣಿಯಾದ ಹಳೆಯ ವಾಹನಗಳಿಗೆ HSRP ಅಳವಡಿಕೆ ಕಡ್ಡಾಯವಾಗಿದೆ. ರಾಜ್ಯದಲ್ಲಿ ಇನ್ನೂ ಸುಮಾರು 1 ಕೋಟಿ ವಾಹನಗಳಿಗೆ HSRP ಅಳವಡಿಸಿಕೊಳ್ಳಬೇಕಿರುವುದರಿಂದ ಗಡುವು ವಿಸ್ತರಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!