Ad imageAd image

ಕನ್ನಡ ಚಿತ್ರರಂಗದ ಹಿರಿಯ ಖ್ಯಾತ ಹಾಸ್ಯನಟ ದ್ವಾರಕೀಶ ಏಪ್ರಿಲ್ 16 ರಂದು ಬೆಳಿಗ್ಗೆ ನಿಧನ.

Bharath Vaibhav
WhatsApp Group Join Now
Telegram Group Join Now

ಬೆಂಗಳೂರು:-ದ್ವಾರಕೀಶ್ ಅವರಿಗೆ 81 ವರ್ಷ ವಯಸ್ಸು ಆಗಿತ್ತು ಅವರು ಅನಾರೋಗ್ಯದಿಂದ ಬಳಲುತ್ತಿದ್ದರು ದ್ವಾರಕೀಶ ಅವರು ಇಂದು ಬೆಳಗ್ಗೆ ಹೃದಯಾಘಾತದಿಂದ ಅವರ ಮನೆಯಲ್ಲಿ ನಿಧನರಾಗಿದ್ದಾರೆ.

ಹಾಸ್ಯ ನಟರಾಗಿ, ನಾಯಕರಾಗಿ ಗುರುತಿಸಿಕೊಂಡಿದ್ದ ದ್ವಾರಕೀಶ್ ಸಿನಿಮಾ ನಿರ್ಮಾಣದಲ್ಲಿಯೂ ಹೊಸ ಹೊಸ ಸಾಹಸ ಮಾಡಿದವರು.ಕನ್ನಡ ಚಿತ್ರರಂಗದಲ್ಲಿಯೇ ಮೊದಲ ಸಾರಿ ವಿದೇಶಕ್ಕೆ ತೆರಳಿ ಸಿಂಗಾಪುರದಲ್ಲಿ ರಾಜಾಕುಳ್ಳ ಸಿನಿಮಾ ಶೂಟಿಂಗ್ ಮಾಡಿಕೊಂಡು ಬಂದಿದ್ದರು.

ದ್ವಾರಕೀಶ್ ನಿಧನಕ್ಕೆ ಚಿತ್ರರಂಗದ ಆಪ್ತರು, ಅಭಿಮಾನಿಗಳು ಸಂತಾಪ ಸೂಚಿಸಿದ್ದಾರೆ.ಡಾ.ರಾಜ್‌ಕುಮಾರ್, ವಿಷ್ಣುವರ್ಧನ್‌ರಂತಹ ದಿಗ್ಗಜರ ಸಿನಿಮಾಗಳನ್ನು ನಿರ್ಮಿಸಿದ ಹೆಗ್ಗಳಿಕೆ ಗಳಿಸಿರುವ ದ್ವಾರಕೀಶ್ ‘ದ್ವಾರಕೀಶ್ ಚಿತ್ರ’ ನಿರ್ಮಾಣ ಸಂಸ್ಥೆ ಮೂಲಕ ಈಗಲೂ ಕನ್ನಡ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ.

ಇವರು ಕನ್ನಡ ಮಾತ್ರವಲ್ಲದೇ, ತಮಿಳು, ಹಿಂದಿ ಸಿನಿಮಾಗಳನ್ನು ಕೂಡ ನಿರ್ಮಿಸಿದ್ದಾರೆ.ದ್ವಾರಕೀಶ್ ಕನ್ನಡ ಚಿತ್ರರಂಗದ ಖ್ಯಾತ ನಟ, ನಿರ್ದೇಶಕ ಹಾಗೂ ನಿರ್ಮಾಪಕ ಇವರು 1942 ಆಗಸ್ಟ್ 19ರಂದು ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ಜನಿಸಿದರು.

ಇವರ ತಂದೆ ಶಾಮರಾವ್ ಮತ್ತು ತಾಯಿ ಜಯಮ್ಮ. ಶಾರದ ವಿಲಾಸ್ & ಬನುಮ್ಯ ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣ ಮುಗಿಸಿದ ಇವರು, ಫ್ರೌಡಶಿಕ್ಷಣದ ನಂತರ ಸಿಪಿಸಿ ಪಾಕಿಟೆಕ್ನಿಕ್ ಕಾಲೇಜಿನಲ್ಲಿ ಮೆಕ್ಯಾನಿಕಲ್ ಇಂಜಿನಿಯರಿಂಗ್ ಮುಗಿಸಿದರು.

ನಂತರ ತಮ್ಮ ಸಹೋದರನ ಜೊತೆ ಸೇರಿ ಭಾರತ್ ಆಟೋ ಸ್ಪೇರ್ ಸ್ಟೋರ್ ಆರಂಭಿಸಿದರು. 1963ರಲ್ಲಿ ವ್ಯಾಪಾರ ಬಿಟ್ಟು ನಟನೆಯತ್ತ ಮುಖ ಮಾಡಿದರು.

ಸಿನಿಜೀವನ 1964ರಲ್ಲಿ ವೀರ ಸಂಕಲ್ಪ ಎಂಬ ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಎಂಟ್ರಿಕೊಟ್ಟ ದ್ವಾರಕೀಶ್, ನಟರಾಗಿ, ಹಾಸ್ಯ ಕಲಾವಿದರಾಗಿ, ಪೋಷಕ ನಟನಾಗಿ ಈವರೆಗೂ ನೂರಾರು ಸಿನಿಮಾಗಳಲ್ಲಿ ನಟಿಸಿದರು.ಒಂದು ಕಾಲದಲ್ಲಿ ವಿಷ್ಣುವರ್ಧನ್ ಹಾಗೂ ದ್ವಾರಕೀಶ್ ಜೋಡಿ ಕಳ್ಳ-ಕುಳ್ಳ ಎಂದೇ ಪ್ರಸಿದ್ಧವಾಗಿತ್ತು.

ಇವರಿಬ್ಬರು ಉತ್ತಮ ಸ್ನೇಹಿತರಾಗಿದ್ದು, ದ್ವಾರಕೀಶ್ ವಿಷ್ಣು ಅಭಿನಯದ ಬಹುತೇಕ ಸಿನಿಮಾಗಳಲ್ಲಿ ತೆರೆಹಂಚಿಕೊಂಡಿದ್ದರು ದೇವರು ಅವರ ಆತ್ಮಕ್ಕೆ ಶಾಂತಿ ನೀಡಲಿ ಹಾಗೂ ಅವರ ಕುಟುಂಬಸ್ಥರಿಗೆ ಭಾರತ ವೈಭವ ಸುದ್ಧಿ ವಾಹಿನಿ ಸಮರ್ಥಿಸುತ್ತದೆ.

ವರದಿ ರಾಜು ಮುಂಡೆ

WhatsApp Group Join Now
Telegram Group Join Now
Share This Article
error: Content is protected !!