ಬಾಗಲಕೋಟೆ : ಬಾಗಲಕೋಟೆಯಲ್ಲಿ ಉಪಚುನಾವಣೆ ಹಿನ್ನೆಲೆ ಮತದಾರರಿಗೆ ಹಣ ಹಂಚುತ್ತಿರುವ ವಿಡಿಯೋ ಒಂದು ವೈರಲ್ ಆಗಿದೆ. ಕಾಂಗ್ರೆಸ್ ಮುಖಂಡನೊಬ್ಬ ಮತದಾರರಿಗೆ ಹಣ ಹಂಚಿರುವ ವಿಡಿಯೋ ವೈರಲ್ ಆಗಿದೆ.
ಜಾಫರ್ ಬೆಟಾರಿ ವಿರುದ್ಧ ಹಣ ಹಂಚಿಕೆ ಮಾಡಿರುವ ಆರೋಪ ಕೇಳಿ ಬಂದಿದೆ.ಕಾಂಗ್ರೆಸ್ ದುಡ್ಡು ಇಸ್ಕೊಳ್ಳಿ ಅಂತ ಹೇಳುತ್ತಿದ್ದಾರೆ. ರಾಜೀವ್ ಗಾಂಧಿ ಕಾಲೋನಿಯ ಬಾಂಬೆ ಕಾಲೋನಿಯಲ್ಲಿ ಈ ರೀತಿ ಹಣ ಹಂಚಿಕೆ ಆಗುತ್ತಿದೆ.
ಈ ರೀತಿ ಹಣ ಹಂಚಿಕೆ ಮಾಡಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗಿದೆ. ಇನ್ನು ಈ ಒಂದು ವಿಡಿಯೋವನ್ನು ಜೆಡಿಎಸ್ ತನ್ನ ಟ್ವೀಟ್ ಖಾತೆಯಲ್ಲಿ ಹಂಚಿಕೊಂಡಿದ್ದು, ಉಪಚುನಾವಣೆಯನ್ನು ಅಕ್ರಮವಾಗಿ ಗೆಲ್ಲಲು @INCKarnataka ಸರ್ಕಾರ ಮತದಾರರಿಗೆ ಹಣ ಹಂಚುತ್ತಿದೆ.
ಬಾಗಲಕೋಟೆ ಉಪಚುನಾವಣೆಯಲ್ಲಿ ಕಾಂಗ್ರೆಸ್ʼನ ಕುರುಡು ಕಾಂಚಾಣ ಸದ್ದು ಮಾಡುತ್ತಿದೆ. ಕಾಂಗ್ರೆಸ್ ಕಾರ್ಯಕರ್ತರು ಕಾಂಗ್ರೆಸ್ ಅಭ್ಯರ್ಥಿಗೆ ಮತಹಾಕುವಂತೆ ಮತದಾರರಿಗೆ ಹಣ ಹಂಚಿಕೆ ಮಾಡಿದ್ದಾರೆ.
ಬಾಗಲಕೋಟೆ ಉಪಚುನಾವಣೆ ವೇಳೆ ನಡೆದಿರುವ ಈ ಅಕ್ರಮದ ಕುರಿತು ಚುನಾವಣಾ ಆಯೋಗವೂ ಕೂಡಲೇ ಸೂಕ್ತ ಕ್ರಮ ಜರುಗಿಸಬೇಕು ಎಂದು @JanataDal_S ಪಕ್ಷವು ಆಗ್ರಹಿಸುತ್ತೇವೆ ಎಂದು ಜೆಡಿಎಸ್ ತಿಳಿಸಿದೆ.




