Ad imageAd image

ವಿಧಾನ ಪರಿಷತ್ ಚುನಾವಣೆ : ಕಾಂಗ್ರೆಸ್ ನಿಂದ 6 ಕ್ಷೇತ್ರಗಳ ಅಭ್ಯರ್ಥಿ ಪಟ್ಟಿ ಬಿಡುಗಡೆ

Bharath Vaibhav
ವಿಧಾನ ಪರಿಷತ್ ಚುನಾವಣೆ : ಕಾಂಗ್ರೆಸ್ ನಿಂದ 6 ಕ್ಷೇತ್ರಗಳ ಅಭ್ಯರ್ಥಿ ಪಟ್ಟಿ ಬಿಡುಗಡೆ
CONGRESS
WhatsApp Group Join Now
Telegram Group Join Now

ಬೆಂಗಳೂರು: ರಾಜ್ಯದಲ್ಲಿ ಲೋಕಸಭಾ ಚುನಾವಣಾ ಮತದಾನ ಮುಗಿಯುತ್ತಿದ್ದಂತೆ ವಿಧಾನ ಪರಿಷತ್ ಚುನಾವಣೆ ಕಾವು ಪಡೆದುಕೊಳ್ಳುತ್ತಿದೆ. ಬಿಜೆಪಿ -ಜೆಡಿಎಸ್ ಮೈತ್ರಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ ಬೆನ್ನಲ್ಲೇ ಇದೀಗ ಕಾಂಗ್ರೆಸ್ ಕೂಡ 6 ಕ್ಷೇತ್ರಗಳಿಗೂ ಅಭ್ಯರ್ಥಿಗಳನ್ನು ಘೋಷಿಸಿದೆ.

ಈ ಹಿಂದೆ ಕಾಂಗ್ರೆಸ್ 5 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿತ್ತು. ಆದರೆ ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಮಾತ್ರ ಅಭ್ಯರ್ಥಿ ಆಯ್ಕೆ ಮಾಡಿರಲಿಲ್ಲ. ಇದೀಗ ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಮರಿತಿಬ್ಬೇಗೌಡ ಅವರನ್ನು ಅಭ್ಯರ್ಥಿಯನ್ನಾಗಿ ಘೋಷಿಸಿದೆ. ಈ ಮೂಲಕ ವಿಧಾನ ಪರಿಷತ್ 6 ಕ್ಷೇತ್ರಗಳಿಗೂ ಕಾಂಗ್ರೆಸ್ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ.

ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ:
ನೈಋತ್ಯ ಶಿಕ್ಷಕರ ಕ್ಷೇತ್ರ – ಕೆ.ಕೆ.ಮಂಜುನಾಥ್
ದಕ್ಷಿಣ ಶಿಕ್ಷಕರ ಕ್ಷೇತ್ರ – ಮರಿತಿಬ್ಬೇಗೌಡ
ಆಗ್ನೇಯ ಶಿಕ್ಷಕರ ಕ್ಷೇತ್ರ – ಡಿ.ಟಿ.ಶ್ರೀನಿವಾಸ್
ಈಶಾನ್ಯ ಪದವೀಧರ ಕ್ಷೇತ್ರ – ಡಾ.ಚಂದ್ರಶೇಖರ್ ಪಾಟೀಲ್
ನೈಋತ್ಯ ಪದವೀಧರರ ಕ್ಷೇತ್ರ -ಆಯನೂರು ಮಂಜುನಾಥ್
ಬೆಂಗಳೂರು ಪದವೀಧರರ ಕ್ಷೇತ್ರ – ರಾಮೋಜಿ ಗೌಡ

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!