Ad imageAd image

ವಿಧಾನ ಪರಿಷತ್ ಚುನಾವಣೆ : ಜೂನ್ 3 ರಂದು ಸಾಂದರ್ಭಿಕ ರಜೆ ಘೋಷಣೆ 

Bharath Vaibhav
WhatsApp Group Join Now
Telegram Group Join Now

ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ ಪದವೀಧರ ಶಿಕ್ಷಕರ ಕ್ಷೇತ್ರಗಳಿಗೆ ಜೂನ್ 3ರ ಸೋಮವಾರ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಪದವೀಧರರು ಹಾಗೂ ಶಿಕ್ಷಕರು ಮತದಾನ ಮಾಡಲು ಅನುಕೂಲವಾಗುವಂತೆ ಅರ್ಹ ಮತದಾರರಿಗೆ ಸೀಮಿತವಾದಂತೆ ಜೂನ್ 3ರಂದು ವಿಶೇಷ ಸಾಂದರ್ಭಿಕ ರಜೆ ಮಂಜೂರು ಮಾಡಲು ಆದೇಶಿಸಲಾಗಿದೆ.

ಕರ್ನಾಟಕ ಈಶಾನ್ಯ ಪದವೀಧರ ಕ್ಷೇತ್ರ, ಕರ್ನಾಟಕ ನೈರುತ್ಯ ಪದವೀಧರ ಕ್ಷೇತ್ರ, ಬೆಂಗಳೂರು ಪದವೀಧರ ಕ್ಷೇತ್ರ, ಕರ್ನಾಟಕ ಆಗ್ನೇಯ ಶಿಕ್ಷಕರ ಕ್ಷೇತ್ರ, ಕರ್ನಾಟಕ ಶಿಕ್ಷಕರ ಕ್ಷೇತ್ರ, ದಕ್ಷಿಣ ಶಿಕ್ಷಕರ ಕ್ಷೇತ್ರ ವ್ಯಾಪ್ತಿಯ ಅರ್ಹ ಮತದಾರರಿಗೆ ರಜೆ ಮಂಜೂರು ಮಾಡಲಾಗಿದೆ.

ವಿಧಾನ ಪರಿಷತ್ ಮತಕ್ಷೇತ್ರಗಳಲ್ಲಿನ ಸರ್ಕಾರಿ ಹಾಗೂ ಖಾಸಗಿ ಶಾಲಾ ಕಾಲೇಜುಗಳು, ಅನುದಾನಿತ ಅನುದಾನ ರಹಿತ ವಿದ್ಯಾಸಂಸ್ಥೆಗಳು, ಎಲ್ಲಾ ಶೈಕ್ಷಣಿಕ ಸಂಸ್ಥೆಗಳು, ರಾಜ್ಯ ಹಾಗೂ ಕೇಂದ್ರ ಸರ್ಕಾರದ ಕಚೇರಿಗಳು ರಾಷ್ಟ್ರೀಕೃತ ಹಾಗೂ ಇತರೆ ಬ್ಯಾಂಕುಗಳು ಕೇಂದ್ರ ಹಾಗೂ ರಾಜ್ಯ ಸರ್ಕಾರದ ಕಾರ್ಖಾನೆಗಳು, ಕೈಗಾರಿಕಾ ಸಂಸ್ಥೆಗಳು, ಸಹಕಾರ ರಂಗದ ಸಂಘ-ಸಂಸ್ಥೆಗಳಲ್ಲಿ, ಎಲ್ಲಾ ವ್ಯವಹಾರಿಕ ಸಂಸ್ಥೆಗಳಲ್ಲಿ, ಉದ್ಯಮಿಕ ಸಂಸ್ಥೆಗಳಲ್ಲಿ ಮತ್ತು ಇತರೆ ಸಂಸ್ಥೆಗಳಲ್ಲಿ ಕಾಯಂ ಆಗಿ ದಿನಗೂಲಿ ಮೇಲೆ ಕೆಲಸ ನಿರ್ವಹಿಸುವ ಪದವೀಧರರು ಹಾಗೂ ಶಿಕ್ಷಕರು ಮತದಾನ ಮಾಡಲು ಅನುಕೂಲವಾಗುವಂತೆ ಅಂತಹ ಅರ್ಹ ಮತದಾರರಿಗೆ ಸೀಮಿತವಾದಂತೆ ಮತ ಚಲಾಯಿಸಲು ಜೂನ್ 3ರಂದು ಸೋಮವಾರ ವಿಶೇಷ ಸಾಂದರ್ಭಿಕ ರಜೆ ಮಂಜೂರು ಮಾಡಲು ಆದೇಶಿಸಲಾಗಿದೆ.

 

 

WhatsApp Group Join Now
Telegram Group Join Now
Share This Article
error: Content is protected !!