ನವದೆಹಲಿ: ರಾಷ್ಟ್ರಪತಿ ಭವನದಲ್ಲಿ ಪದ್ಮ ಪ್ರಶಸ್ತಿ ಪ್ರದಾನ ಸಮಾರಂಭ ನಡೆದಿದ್ದು, ನಾಲ್ವರಿಗೆ ಪದ್ಮವಿಭೂಷಣ, 10 ಜನರಿಗೆ ಪದ್ಮಭೂಷಣ, 67 ಜನರಿಗೆ ಪದ್ಮಶ್ರೀ ಪ್ರಶಸ್ತಿಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರದಾನ ಮಾಡಿದ್ದಾರೆ.
ಕರ್ನಾಟಕದ ನಾಲ್ವರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಲಾಗಿದೆ.ಲಕ್ಷ್ಮಿ ನಾರಾಯಣ ಸುಬ್ರಹ್ಮಣ್ಯಂ ಅವರಿಗೆ ಪದ್ಮವಿಭೂಷಣ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
ಅನಂತರಾಮಯ್ಯ ಅವರಿಗೆ ಪದ್ಮಭೂಷಣ ಪ್ರಶಸ್ತಿ ನೀಡಲಾಗಿದೆ. ಹಾಸನ ರಘು ಮತ್ತು ಡಾ. ವಿಜಯಲಕ್ಷ್ಮಿ ದೇಶಮಾನೆಯವರಿಗೆ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪದ್ಮ ಪ್ರಶಸ್ತಿ ಪ್ರದಾನ ಮಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯರು ಸಮಾರಂಭದಲ್ಲಿ ಭಾಗವಹಿಸಿದ್ದರು.