Ad imageAd image

ಯಾರು ಏನೇ ಹೇಳಿದರು ಬಿಜೆಪಿ ರಾಜ್ಯಾಧ್ಯಕ್ಷ : ರಮೇಶ್ ಜಾರಕಿಹೊಳಿಗೆ ತಿರುಗೇಟು ನೀಡಿದ ವಿಜಯೇಂದ್ರ 

Bharath Vaibhav
ಯಾರು ಏನೇ ಹೇಳಿದರು ಬಿಜೆಪಿ ರಾಜ್ಯಾಧ್ಯಕ್ಷ : ರಮೇಶ್ ಜಾರಕಿಹೊಳಿಗೆ ತಿರುಗೇಟು ನೀಡಿದ ವಿಜಯೇಂದ್ರ 
WhatsApp Group Join Now
Telegram Group Join Now

ಶಿವಮೊಗ್ಗ : ಬಿ.ವೈ ವಿಜಯೇಂದ್ರನನ್ನು ಬಿಜೆಪಿ ರಾಜ್ಯಾಧ್ಯಕ್ಷನಾಗಿ ಒಪ್ಪಿಕೊಳ್ಳುವುದಿಲ್ಲ ಎಂದು ಗೋಕಾಕ್ ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ಹೇಳಿಕೆ ನೀಡಿದ್ದರು. ಇದೀಗ ಈ ಒಂದು ಹೇಳಿಕೆಗೆ ಬಿವೈ ವಿಜಯೇಂದ್ರ ತಿರುಗೇಟು ನೀಡಿದು, ಯಾರು ಏನೇ ಹೇಳಿದರು ಬಿಜೆಪಿ ರಾಜ್ಯಾಧ್ಯಕ್ಷ ನಾನೇ ಎಂದು ರಮೇಶ್ ಜಾರಕಿಹೊಳಿಗೆ ತಿರುಗೇಟು ನೀಡಿದರು.

ಶಿವಮೊಗ್ಗದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ವಿಜಯೇಂದ್ರನನ್ನು ಒಪ್ಪುವುದಿಲ್ಲ ಎಂದು ಶಾಸಕ ರಮೇಶ್ ಜಾರಕಿಹೊಳಿ ಅವರ ಹೇಳಿಕೆಗೆ ಪ್ರತಿಕ್ರಿಯಿಸಿ, ಯಾರು ಏನೇ ಹೇಳಿದರೂ ಕಾರ್ಯಕರ್ತರು ನನ್ನನ್ನು ಒಪ್ಪಿದ್ದಾರೆ ಎಂದು ಅವರು ತಿಳಿಸಿದರು.

ನಾನು ರಾಜ್ಯಾಧ್ಯಕ್ಷನಾಗಿ ನನ್ನ ಕರ್ತವ್ಯವನ್ನು ನಿರ್ವಹಿಸುತ್ತಿದ್ದೇನೆ. ಯಾರು ಏನೇ ಮಾತನಾಡಿದರೂ ವಿಜಯೇಂದ್ರನೇ ರಾಜ್ಯಾಧ್ಯಕ್ಷ.ನನ್ನ ರಾಜ್ಯಾಧ್ಯಕ್ಷನಾಗಿ ಘೋಷಿಸಿದ್ದು ಪಕ್ಷದ ಹೈಕಮಾಂಡ್, ಪ್ರಧಾನಿ ಮೋದಿ, ಅಮಿತ್ ಶಾ ಹಾಗೂ ಜೆಪಿ ನಡ್ದ ಎಂದು ತಿಳಿಸಿದರು.

ಕಾಂಗ್ರೆಸ್ ಸರ್ಕಾರಕ್ಕೆ ಹಿಂದೂ ವಿರೋಧಿ ಮನಸ್ಥಿತಿ ಬಂದಿದೆ. ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ಗಲಭೆ ನಡೆದಿದೆ. ಪೆಟ್ರೋಲ್ ಬಾಂಬ್ ಹಾಕಿ ಅಂಗಡಿಗಳನ್ನು ಸುಟ್ಟುಹಾಕಿದ್ದಾರೆ. ಪಾಂಡವಪುರದಲ್ಲಿನ ಆರ್ ಎಸ್ ಎಸ್ ಕಚೇರಿಯ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಸರ್ಕಾರದ ಕುಮುಕ್ಕಿನಿಂದ ಪೊಲೀಸರು ಹೀಗೆ ಮಾಡುತ್ತಿದ್ದಾರೆ ಎಂದು ಕಿಡಿ ಕಾರಿದರು.

ಇದು ರಣಹೇಡಿ ಸರ್ಕಾರ. ರಾಜ್ಯದ ಗೃಹ ಮಂತ್ರಿಯನ್ನು ಆ ದೇವರೇ ಕಾಪಾಡಬೇಕು. ಯಾವುದೇ ಘಟನೆ ನಡೆದರೂ ಅದು ಸಣ್ಣ ಘಟನೆ ಅಂತಾರೆ ಇದರಿಂದ ದೇಶದ್ರೋಹಿಗಳಿಗೆ ಹೆಚ್ಚು ಶಕ್ತಿ ಕೊಟ್ಟಂತಾಗಿದೆ ಸಿದ್ದರಾಮಯ್ಯ ತಾವು ಸಿಎಂ ಎಂದು ನೆನಪಿಸಿಕೊಳ್ಳಬೇಕು ಎಂದು ಸರ್ಕಾರದ ವಿರುದ್ಧ ಬಿವೈ ವಿಜಯೇಂದ್ರ ವಾಗ್ದಾಳಿ ನಡೆಸಿದರು.

 

 

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!