Join The Telegram | Join The WhatsApp |
ಇಂಡಿ : ಪಕ್ಷದ ಹಿತ ದೃಷ್ಟಿಯಿಂದ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧ ಯಾರು ಮಾತನಾಡಬಾರದು. ಇದು ಪಕ್ಷಕ್ಕೆ ಒಳ್ಳೆಯ ಬೆಳವಣಿಗೆ ಎಂದು ಶಾಸಕ ಯತ್ನಾಳಗೆ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದರು.
ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಹೊರ್ತಿಯಲ್ಲಿ ಶುಕ್ರವಾರ ಮಾಧ್ಯಮದ ಎದುರು ಮಾತನಾಡಿದ ಅವರು, ಪಕ್ಷದ ಭವಿಷ್ಯದ ದೃಷ್ಟಿಯಿಂದ ಯತ್ನಾಳ ಒಳ್ಳೆಯ ಕೆಲಸ ಮಾಡಿದ್ದಾರೆ.
ಶಾಸಕ ಯತ್ನಾಳ ಅವರು ಹಿರಿಯರಿದ್ದಾರೆ. ಅವರ ಬಗ್ಗೆ ನಾನು ಮಾತನಾಡಲ್ಲ. ಯಡಿಯೂರಪ್ಪ ಒಬ್ಬ ಧೀಮಂತ ನಾಯಕ, ರೈತ ನಾಯಕ, ಒಬ್ಬ ಹೋರಾಟಗಾರ ಆಗಿದ್ದಾರೆ. ಅವರಿಗೆ ಕಲ್ಲನ್ನು ಎಸೆದರೆ ಅದು ಪಕ್ಷಕ್ಕೆ ಹೊಡೆತ ಬೀಳುತ್ತದೆ. ಇದು ಎಲ್ಲರೂ ಅರ್ಥ ಮಾಡಿಕೊಳ್ಳಬೇಕು. ಅದಕ್ಕಾಗಿ ಎನೇ ಸಮಸ್ಯೆ ಇದ್ದರೂ ಕುಳಿತು ಬಗೆಹರಿಸಿಕೊಳ್ಳಬೇಕು. ನಾನಂತೂ ಇನ್ನೂ ರಾಜಕೀಯದಲ್ಲಿ ಅಂಬೆಗಾಲಿಡುತ್ತಿರುವೆ. ನನಗೆ ಅವರ ಬಗ್ಗೆ ವೈಯಕ್ತಿಕ ವಾದ ಯಾವುದೇ ವಿರೋಧಗಳಿಲ್ಲ. ನಮ್ಮ ಹೇಳಿಕೆಗಳು ಪಕ್ಷದ ಬೆಳವಣಿಗೆಗೆ ಪೂರಕವಾಗಿರಬೇಕು. ಮುಂದಿನ ದಿನಗಳಲ್ಲಿ ಪಕ್ಷ ಬಲಪಡಿಸಿ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಎಲ್ಲರೂ ಪ್ರಯತ್ನಿಸಬೇಕು ಎಂದರು. ಮುಂದಿನ ಚುನಾವಣೆಯಲ್ಲಿ ಹೈಕಮಾಂಡ್ ಏನೆ ಕೆಲಸ ನೀಡಿದ್ರೂ ಮಾಡುತ್ತೇನೆ. ಚುನಾವಣೆ ಎದುರಿಸಲು ನಾನು ಸಿದ್ಧನಾಗಿದ್ದೇನೆ. ಅದಕ್ಕಾಗಿ ಬರುವ ಚುನಾವಣೆಗೆ ಆಖಾಡಕ್ಕೆ ಇಳಿಯುತ್ತೇನೆ ಎಂದರು.
ವರದಿ.ತುಕಾರಾಮ ಪವಾರ
Join The Telegram | Join The WhatsApp |