ಚನ್ನಮ್ಮನ ಕಿತ್ತೂರು:- ಗ್ರಾಮ ಆಡಳಿತ ಅಧಿಕಾರಿಗಳ ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿ ಹಲವು ದಿನಗಳಿಂದ ಪ್ರತಿಭಟನೆ ಧರಣಿ ಮತ್ತು ಮನವಿಗಳನ್ನು ಸರ್ಕಾರಕ್ಕೆ ನೀಡುತ್ತಾ ಬಂದರು ಸಹ ಸರ್ಕಾರ ಇದರ ಬಗ್ಗೆ ಗಮನ ಹರಿಸತ್ತಿಲ್ಲ .ಕಿತ್ತೂರಿನ ಎಲ್ಲ ಗ್ರಾಮ ಆಡಳಿತ ಅಧಿಕಾರಿಗಳು ಕಿತ್ತೂರಿನ ಮಿನಿ ವಿಧಾನಸೌಧ ಮುಂದೆ ಧರಣಿ ನಡೆಸಿ ನಮ್ಮ ಎಲ್ಲ ಬೇಡಿಕೆಗಳನ್ನು ಸರ್ಕಾರ ಕೊಡಲೇ ಈಡೇರಿಸಬೇಕು ಒತ್ತಾಸಿದ್ದಾರೆ.
ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವ ಬಗ್ಗೆ- ಗ್ರಾಮ ಆಡಳಿತ ಅಧಿಕಾರಿಗಳಿಗೆ ಸುಸಜ್ಜಿತವಾದ ಕಛೇರಿ ನೀಡಬೇಕು, ಉತ್ತಮ ಗುಣಮಟ್ಟದ ಟೇಬಲ್ ಮತ್ತು ಕುರ್ಚಿ ಮತ್ತು ಅಲ್ಮಾರಾ, ಅತ್ಯುತ್ತಮ ಗುಣಮಟ್ಟದ ಮೊಬೈಲ್ ಪೋನ್ 12ಜಿಬಿ/256ಜಿಬಿ. ಸಿಯುಜಿ ಸಿಮ್ ಮತ್ತು ಡೇಟಾ, ಗೂಗಲ್ ಕ್ರೋಮ್/ಲಾಪ್ಯ್ ಟಾಪ್, ಪ್ರಿಂಟರ್ ಮತ್ತು ಸ್ಕ್ಯಾರ್, ನೀಡಬೇಕು ಎಂದು ಒತ್ತಾಯಿಸಿದ್ದಾರೆ.
ರಾಜ್ಯದ ಗ್ರಾಮ ಆಡಳಿತ ಅಧಿಕಾರಿಗಳು ಪದೋನ್ನತಿಯಯಲ್ಲಿ ವಂಚಿತರಾಗಿ ಸುಮಾರು 30 ವರ್ಷಗಳ ಮೇಲ್ಪಟ್ಟ ಪದೋನತಿಯನ್ನು ನಿವೃತ್ತಿ ಅಂಚಿನಲ್ಲಿ ಪಡೆಯುತ್ತಿವುದರಿಂದ ರಾಜ್ಯಾದಲ್ಲಿನ 1196 ಗ್ರೇಡ್-1 ಗ್ರಾಮ ಪಂಚಾಯತ್ ಹಾಗೂ 304 ಕಸಬಾ ಹೋಬಳಿ ವೃತ್ತಗಳನ್ನು ಗ್ರೇಡ್-1 ಗ್ರಾಮ ಆಡಳಿತ ಅಧಿಕಾರಿ ಹುದ್ದೆಯನ್ನಾಗಿ ಮೇಲ್ದರ್ಜೆಗೇರಿಸಿ ರಾಜಸ್ವ ನಿರಿಕ್ಷಕರು/ಪ್ರಥಮ ದರ್ಜೆ ಸಹಾಯಕರು/ಗ್ರೇಡ್ -1 ಗ್ರಾಮ ಆಡಳಿತ ಅಧಿಕಾರಿ ಹುದ್ದೆಯನ್ನಾಗಿ ಪರೀಷ್ಕರಿಸಿ ಮೇಲ್ದರ್ಜೆಗೇರಿಸಿ ಪದೋನ್ನತಿಯನ್ನು ನೀಡಬೇಕು.
ಬೆಳೆ ಸಮೀಕ್ಷೆ ಹಾಗೂ ಬೆಳೆ .ಹಾನಿ ಪರಿಹಾರದ ಕೆಲಸವನ್ನು ಕೃಷಿ/ತೋಟಗಾರಿಕೆಗೆ ಇಲಾಖೆಗೆ ನಿರ್ವಸಹಿಸುವಂತೆ ಆದೇಶಿಸುವ ಬಗ್ಗೆ, ಪ್ರೋಟೋಕಾಲ್ ಕೆಲಸದಿಂದ ಗ್ರಾಮ ಆಡಳಿತ ಅಧಿಕಾರಿಗಳಿಗೆ ಕೈಬಿಡುವಂತೆ ಸೂಕ್ತ ಆದೇಶ ನೀಡಬೇಕು, ಇನ್ನೂ ಹಲವು ಬೇಡಿಕೆಗಳಿಗೆ ಒತ್ತಾಯಿಸಿ ಗ್ರಾಮ ಆಡಳಿತ ಸಂಘದ ಅಧ್ಯಕ್ಷರಾದ ಶ್ರೀ ರವೀಂದ್ರ ಜಾದವ ಅವರು ಮಾತನಾಡಿದರು. ಧರಣಿ ನಡೆಸಿದರು. ಈ ಸಂದರ್ಭದಲ್ಲಿ ಸರ್ಕಾರಿ ನೌಕರರ ಸಂಘ ಮತ್ತು ಆರೋಗ್ಯ ಇಲಾಖೆಯವರು ಬೆಂಬಲ ನೀಡಿದರು ಎಲ್ಲ ಗ್ರಾಮ ಆಡಳಿತ ಅಧಿಕಾರಿಗಳು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ವರದಿ:- ಬಸವರಾಜ ಭೀಮರಾಣಿ.ಜಗದೀಶ ಕಡೋಲಿ