ಬೆಂಗಳೂರು/ಧಾರವಾಡ : ಯೋಗೇಶ್ ಗೌಡ ಕೊಲೆ ಪ್ರಕರಣದ ಆರೋಪಿ, ಧಾರವಾಡ ಶಾಸಕ ವಿನಯ್ ಕುಲಕರ್ಣಿ ಜಾಮೀನು ರದ್ದಾಗಿದೆ. ಆದ್ದರಿಂದ ಕೋರ್ಟ್ ಆದೇಶದಂತೆ ಇಂದು ವಿನಯ್ ಕುಲಕರ್ಣಿಯವರನ್ನು ಸಿಬಿಐ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಕೋರ್ಟ್ ವಚಾರಣೆ ಮುಗಿದ ಬಳಿಕ ಶಾಸಕ ವಿನಯ್ ಕುಲಕರ್ಣಿಯವರನ್ನು ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್ ಮಾಡಲಾಗುವುದು.
ಇತ್ತೀಚೆಗೆ ಸುಪ್ರೀಂ ಕೋರ್ಟ್ ವಿನಯ್ ಕುಲಕರ್ಣಿಯ ಜಾಮೀನನ್ನು ರದ್ದುಪಡಿಸಿತು. ಒಂದು ವಾರದೊಳಗೆ ನ್ಯಾಯಾಲಯಕ್ಕೆ ಶರಣಾಗುವಂತೆ ಸೂಚಿಸಿತ್ತು
ವಿನಯ್ ಕುಲಕರ್ಣಿ ಬೆಂಬಲಿಗರು ಸಿಟಿ ಸಿವಿಲ್ ಕೋರ್ಟ್ ಮುಂಭಾಗ ಜಮಾಯಿಸಿದ್ರು. ಪರಪ್ಪನ ಅಗ್ರಹಾರ ಜೈಲಿಗೆ ವಿನಯ್ ಕುಲಕರ್ಣಿಯನ್ನ ಸಿಬಿಐ ಅಧಿಕಾರಿಗಳು ಕರೆದೊಯ್ದಿದ್ದಾರೆ. ಈ ವೇಳೆ ತಮ್ಮ ನಾಯಕ ಜೈಲು ಸೇರುತ್ತಿರೋದನ್ನ ಕಂಡು ಕೋರ್ಟ್ ಮುಂಭಾಗ ಬೆಂಬಲಿಗರು ಕಣ್ಣೀರು ಹಾಕಿದ್ದಾರೆ.