ಕಂದಗಲ್ಲ :ಗ್ರಾಮದ ವಿಶ್ವಜ್ಯೋತಿ ಶಿಕ್ಷಣ ಸಂಸ್ಥೆ ಹಾಗೂ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಮಕ್ಕಳ ಕಲ್ಯಾಣ ಸಮಿತಿ ವತಿಯಿಂದ ಪ್ರತಿಭಾವಂತ ಮಕ್ಕಳಿಗೆ ಪ್ರಶಸ್ತಿ ಪ್ರಧಾನ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಮು ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಪತ್ರಕರ್ತ ವೀರೇಶ ಶಿಂಪಿ ಗ್ರಾಮೀಣ ಭಾಗದಲ್ಲಿರುವ ಈ ಸಂಸ್ಥೆಯ ಕಾರ್ಯ ಮೆಚ್ಚುವಂತಹದ್ದು ಮೇಲಿಂದ ಮೇಲೆ ಹಲವಾರು ಕಾರ್ಯಕ್ರಮಗಳನ್ನು ಆಯೋಜನೆ ಮಾಡುವ ಮುಖಾಂತರ ಮಕ್ಕಳ ಉಜ್ವಲ ಭವಿಷ್ಯಕ್ಕೆ ದಾರಿದೀಪವಾಗಿದೆ, ಇನ್ನು ಹೆಚ್ಚಿನ ರೀತಿಯಲ್ಲಿ ಈ ಸಂಸ್ಥೆ ಜನಪರ ಕೆಲಸ ಮಾಡುವ ಮುಖಾಂತರ ಮುಂದುವರಿದು ಹೆಮ್ಮರವಾಗಿ ಬೆಳೆಯಲಿ ಎಂದರು.
ಸಂಸ್ಥೆಯ ಅಧ್ಯಕ್ಷ ಮಹಮ್ಮದ ಜುನೈದ್ ಬಡಿಗೇರ ಸಭೆಯ ಅಧ್ಯಕ್ಷತೆ ವಹಿಸಿದ್ದರು.
ಗ್ರಾಮ ಪಂಚಾಯತ ಅಧ್ಯಕ್ಷ ಬಸವರಾಜ್ ಅಳ್ಳೊಳ್ಳಿ ಶಿವಪುತ್ರಪ್ಪ ಕುಂದಗೋಳ, ಇಳಕಲ್ಲನ ರಚಿತ ಚೇತನ ಭಂಢಾರಿ, ಲೀಗರಾಜ ಶಿರಗುಂಪಿ, ಉಪಸ್ಥಿತರಿದ್ದರು.