ಚಿಕ್ಕೋಡಿ: ರೋಡ ಜೋಡಟ್ಟಿ ಗ್ರಾಮಕ್ಕೆ ಬಿಜೆಪಿ ಅಧಿಕೃತ ಅಭ್ಯರ್ಥಿ ಶ್ರೀ ಅಣ್ಣಾಸಾಹೇಬ ಜೊಲ್ಲೆ ಅವರ ಪರವಾಗಿ ಬಸವಜ್ಯೋತಿ ಯೂಥ ಫೌಂಡೇಶನ ಅಧ್ಯಕ್ಷ್ಯರಾದ ಕು. ಬಸವಪ್ರಸಾದ ಜೊಲ್ಲೆ ಹಾಗೂ ರಾಯಬಾಗ್ ಮತಕ್ಷೇತ್ರದ ಶಾಸಕರಾದ ದುರ್ಯೋಧನ ಐಹೊಳೆಯವರು ಪ್ರಚಾರ ಕೈಗೊಂಡು ಮತಯಾಚನೆ ಮಾಡಿದರು.
ತಮ್ಮ ಮೊದಲ ಅವಧಿಯಲ್ಲಿ ಸಂಸದರು ಅನೇಕ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದ್ದಾರೆ. ಕ್ಷೇತ್ರದಲ್ಲಿ ಮೂಲಸೌಕರ್ಯ,ರಸ್ತೆ ಸೇರಿದಂತೆ ಜನತೆಯ ಸಮಸ್ಯೆಗಳಿಗೆ ಸ್ಪಂದಿಸಿ ಸಾಕಷ್ಟು ಸಹಾಯ ಮಾಡಿದ್ದಾರೆ. ಚಿಕ್ಕೋಡಿ ಕ್ಷೇತ್ರ ಸದಾ ಅಭಿವೃದ್ಧಿ ಪಥದಲ್ಲಿ ಸಾಗಲು ಶ್ರೀ ಅಣ್ಣಾಸಾಹೇಬ ಜೊಲ್ಲೆ ಅವರನ್ನು ಮತ್ತೊಮ್ಮೆ ಪಕ್ಷಕ್ಕೆ ಬೆಂಬಲಿಸಿ ಎಂದು ಹೇಳಿದರು.
ಈ ಸಂದರ್ಭದಲ್ಲಿ ಶಾಸಕರಾದ ಶ್ರೀ ದುರ್ಯೋಧನ ಐಹೊಳೆ,ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಶ್ರೀ ಪವನ ಕತ್ತಿ, ಶ್ರೀ ರಮೇಶ ಕಾಳನ್ನವರ,ಗ್ರಾಮ ಪಂಚಾಯತ್ ಸದಸ್ಯರು,ಸ್ಥಳೀಯ ಮುಖಂಡರು, ಗಣ್ಯರು ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.
ವರದಿ ರಾಜು ಮುಂಡೆ