ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯು ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ವೈದ್ಯರ ಕುರಿತು ಮಹತ್ವ ನಿರ್ಣಯ ಕೈಗೊಂಡಿದೆ.
ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಖಾಯಂ ಸೂಪರ್ ಸ್ಪೆಷಾಲಿಟಿ ವೈದ್ಯರ ವಯೋನಿವೃತ್ತಿ ವಯಸ್ಸನ್ನು 60 ರಿಂದ 65 ಕ್ಕೆ ಹೆಚ್ಚಿಸಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ.ಪಾಟೀಲ್ ಅವರು ತಿಳಿಸಿದ್ದಾರೆ.




