ನವದೆಹಲಿ : ಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳ ಒಡೆತನದ ಪ್ರತಿಯೊಂದು ಆಸ್ತಿಯ ವಿವರವನ್ನು ತಿಳಿಯುವ ಸಂಪೂರ್ಣ ಹಕ್ಕು ಮತದಾರರಿಗಿಲ್ಲ ಎಂದು ಸುಪ್ರೀಂ ಕೋರ್ಟ್ ಇಂದು ಹೇಳಿದೆ.
ಅರುಣಾಚಲಪ್ರದೇಶದ ತೇಜು ವಿಧಾನಸಭಾ ಕ್ಷೇತ್ರದಲ್ಲಿ 2019ರ ಚುನಾವಣೆಯಲ್ಲಿ ಪಕ್ಷೇತರರಾಗಿ ಗೆದ್ದಿದ್ದ ಕಾರಿಖೋಕ ಕ್ರಿ ಅವರ ಶಾಸಕ ಸ್ಥಾನವನ್ನು ಕೋರ್ಟ್ ಎತ್ತಿಹಿಡಿದಿದೆ.
ಸರಿಯಾಗಿ ಆಸ್ತಿ ಘೋಷಣೆ ಮಾಡಿಲ್ಲವೆಂದು ಕಾರಿಖೋ ಕ್ರಿ ಅವರ ಶಾಸಕ ಸ್ಥಾನವನ್ನು ಅಸಿಂಧು ಎಂದು ತೀರ್ಮಾನಿಸಿದ್ದ ಗುವಾಹಟಿ ಹೈಕೋರ್ಟ್ ಆದೇಶವನ್ನು ಸುಪ್ರೀಂಕೋರ್ಟ್ ತಳ್ಳಿಹಾಕಿದೆ.
ಒಬ್ಬ ಅಭ್ಯರ್ಥಿಯ ಖಾಸಗಿ ಬದುಕಿನ ಆಳಕ್ಕೆ ಇಳಿಯುವ ಸಂಪೂರ್ಣ ಹಕ್ಕು ಯಾವುದೇ ಮತದಾರರಿಗಿಲ್ಲ, ಮತದಾನದ ಮೇಲೆ ಪರಿಣಾಮ ಬೀರುವಂತಹ ಮಾಹಿತಿ ಬಹಿರಂಗಗೊಳ್ಳಬೇಕು,” ಎಂದು ನ್ಯಾಯಮೂರ್ತಿಗಳಾದ ಅನಿರುದ್ಧ ಬೋಸ್ ಮತ್ತು ಪಿ ವಿ ಸಂಜಯ್ ಕುಮಾರ್ ಅವರ ಪೀಠ ಹೇಳಿದೆ.
ಸಾರ್ವಜನಿಕ ಹುದ್ದೆಗೆ ಅಭ್ಯರ್ಥಿತನಕ್ಕೆ ಅಪ್ರಸ್ತುತವಾದ ವಿಚಾರಗಳ ಕುರಿತಂತೆ ಅಭ್ಯರ್ಥಿಗಳಿಗೆ ಗೌಪ್ಯತೆಯ ಹಕ್ಕಿದೆ ಎಂದು ನ್ಯಾಯಾಲಯ ಹೇಳಿದೆ.
ಚರಾಸ್ತಿ ಬಹಳ ದೊಡ್ಡ ಮೊತ್ತದ್ದಾಗಿದ್ದರೆ ಮತ್ತು ಐಷಾರಾಮಿ ಜೀವನಶೈಲಿಯನ್ನು ಬಿಂಬಿಸುತ್ತಿದ್ದರೆ ಮಾತ್ರ ಅದನ್ನು ಆಸ್ತಿ ಘೋಷಣೆಯ ಅಫಿಡವಿಟ್ನಲ್ಲಿ ಸೇರಿಸಬಹುದು.
ಇಲ್ಲದಿದ್ದರೆ ಅಭ್ಯರ್ಥಿಗಳು ಪ್ರತಿಯೊಂದು ಚರಾಸ್ತಿಯ ವಿವರವನ್ನು ಬಹಿರಂಗಪಡಿಸುವ ಅಗತ್ಯ ಇಲ್ಲ ಎಂದು ಸರ್ವೋಚ್ಚ ನ್ಯಾಯಾಲಯ ತನ್ನ ತೀರ್ಪಿನಲ್ಲಿ ತಿಳಿಸಿದೆ.
ನ್ಯಾಯಮೂರ್ತಿಗಳಾದ ಅನಿರುದ್ಧ ಬೋಸ್ ಮತ್ತು ಸಂಜಯ್ ಕುಮಾರ್ ಅವರಿದ್ದ ಸುಪ್ರೀಂ ನ್ಯಾಯಪೀಠ ಈ ಪ್ರಕರಣದ ವಿಚಾರಣೆ ನಡೆಸಿದೆ.
ಅರುಣಾಚಲ ಪ್ರದೇಶದಲ್ಲಿ 2019ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ತೇಝು ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿ ಕರಿಬೊ ಕ್ರಿ ಅವರ ಆಯ್ಕೆಯನ್ನು ರದ್ದುಗೊಳಿಸಿದ ಗುವಾಹಟಿ ಹೈಕೋರ್ಟ್ ಆದೇಶವನ್ನು ಬದಿಗೆ ಸರಿಸಿ ಅವರ ಆಯ್ಕೆಯನ್ನು ಎತ್ತಿ ಹಿಡಿದು ಆದೇಶ ನೀಡುವ ವೇಳೆ ಸುಪ್ರೀಂ ಕೋರ್ಟ್ ಮೇಲಿನಂತೆ ಹೇಳಿದೆ.