ಜಿಲ್ಲಾಧಿಕಾರಿಗಳಿಗೆ ನ್ಯಾಯಾಂಗ ಅಧಿಕಾರ ನೀಡುವುದು – ಇದು ಸಂಪೂರ್ಣವಾಗಿ ಅನ್ಯಾಯಕರ ಮತ್ತು ಸಂವಿಧಾನ ವಿರೋಧಿ ಕ್ರಮ : ಅಪ್ಸರ್ ಕೊಡ್ಲಿಪೇಟೆ ಆರೋಪ
ಹಾಸನ : ರಾಜ್ಯಸಭೆಯಲ್ಲಿ ವಕ್ಫ್ ತಿದ್ದುಪಡಿ ಮಸೂದೆ 2024 ಮಂಡನೆಯನ್ನು ವಿರೋಧಿಸಿ ಸೋಷಿಯಲ್ ಡೆಮೊಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಹಾಸನ ಜಿಲ್ಲಾ ಸಮಿತಿ ವತಿಯಿಂದ ಎಸ್‌ಡಿಪಿಐ ರಾಜ್ಯ ಪ್ರದಾನ ಕಾರ್ಯದರ್ಶಿ ಅಪ್ಸರ್ ಕೊಡ್ಲಿಪೇಟೆ ಯವರು ನೇತೃತ್ವದಲ್ಲಿ ಹಾಸನದ ಹೇಮಾವತಿ ವೃತ್ತದಲ್ಲಿ ಬಿಲ್ ನ ಪ್ರತಿಯನ್ನು ಹರಿಯುವ ಮುಖಾಂತರ ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಎಸ್ಡಿಪಿಐ ರಾಜ್ಯ ಪ್ರಧಾನ ಕಾರ್ಯದರ್ಶಿ ಅಪ್ಸರ್ ಕೊಡ್ಲಿಪೇಟೆ ಈ ಮಸೂದೆಗೆ ತೀವ್ರವಾಗಿ ವಿರೋಧ ವ್ಯಕ್ತಪಡಿಸಿ ಈ ಮಸೂದೆ ಅಸಾಂವಿಧಾನಿಕ ಮಾತ್ರವಲ್ಲದೇ ವಕ್ಫ್ ಸಂಪತ್ತನ್ನು ಕಳಿಸುವ ಕೋಮುವಾದಿ ಸರ್ಕಾರದ ಹುನ್ನಾರ ಜಿಲ್ಲಾಧಿಕಾರಿಗಳಿಗೆ ನ್ಯಾಯಾಂಗ ಅಧಿಕಾರ ನೀಡುವುದು – ಇದು ಸಂಪೂರ್ಣವಾಗಿ ಅನ್ಯಾಯಕರ ಮತ್ತು ಸಂವಿಧಾನ ವಿರೋಧಿ.
ಈ ಮಸೂದೆಯನ್ನು ಹಿಂದಕ್ಕೆ ತೆಗೆದುಕೊಳ್ಳದಿದ್ದರೆ, ದೇಶದಾದ್ಯಂತ CAA, NRC ಮಾದರಿಯ ಭಾರಿ ಪ್ರತಿಭಟನೆಗಳು ನಡೆಯಲಿವೆ ಎಂದು ಒಕ್ಕೂಟ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.
ಮುಂದುವರಿದು ಮಾತನಾಡಿದ ಅವರು ನಾವು ಇಂದು ಇಲ್ಲಿ ಸೇರಿರುವುದು ಭಾರತದ ಮುಸ್ಲಿಂ ಸಮುದಾಯದ ಸಂವಿಧಾನಿಕ ಹಕ್ಕುಗಳು ಮತ್ತು ವಕ್ಫ್ ಆಸ್ತಿಗಳ ರಕ್ಷಿಸುವ ಬಗ್ಗೆ ಅಲ್ಲ ಮೋದಿ ಸರ್ಕಾರ ಈ ಮಸೂದೆಯ ಮೂಲಕ ವಕ್ಫ್ ಬೋರ್ಡ್ ಮೇಲೆ ಹಿಂದೂತ್ವ ಆದರ್ಶಗಳನ್ನು ಬಲಾತ್ಕಾರವಾಗಿ ಹೇರಲು ಯತ್ನಿಸುತ್ತಿದೆ, ಇದು ಧಾರ್ಮಿಕ ಸ್ವಾತಂತ್ರ್ಯ ಮತ್ತು ಸ್ವಾಯತ್ತತೆಗೆ ವಿರುದ್ಧವಾದದ್ದು ಎಂದು ಅಭಿಪ್ರಾಯಪಟ್ಟರು.

. ತಿದ್ದುಪಡಿಯ ಹಿಂದಿನ ಅಸಲಿ ಉದ್ದೇಶ
•ವಕ್ಫ್ ಕಾಯ್ದೆಯ ಅನುಷ್ಠಾನವನ್ನು BJP ತನ್ನ ಬಹುಮತದ ಬಲದಿಂದ ದುರುಪಯೋಗಪಡಿಸಿಕೊಂಡು ದೇಶವನ್ನು ಕೇಸರಿ ಬಣ್ಣದಿಂದ ಮುಚ್ಚಲು ಪ್ರಯತ್ನಿಸುತ್ತಿದೆ.
•ಈ ಮಸೂದೆ ಮುಸ್ಲಿಂ ಸಮುದಾಯದ ಹಕ್ಕುಗಳ ಮೇಲೆ ನೇರ ದಾಳಿ, ಹಾಗೆಯೇ ವಕ್ಫ್ ಸಂಸ್ಥೆಗಳ ಶಕ್ತಿಯನ್ನು ಕುಂದಿಸುತ್ತಿವೆ.
•ಈಗಿನ ಕಾನೂನುಗಳು ಹಿಂದೂ ಧಾರ್ಮಿಕ ಆಸ್ತಿಗಳನ್ನು ಹಿಂದೂ ಅಲ್ಲದವರಿಂದ ನಿರ್ವಹಿಸುವಂತಾಗಲು ನಿರ್ಬಂಧಿಸುತ್ತವೆ. ಆದರೆ ಹೊಸ ವಕ್ಫ್ ಮಸೂದೆಯಡಿಯಲ್ಲಿ, ವಕ್ಫ್ ಬೋರ್ಡ್ ಸದಸ್ಯರ ಬಹುಪಾಲು—ಸಿಇಒ ಸಹ ಮುಸ್ಲಿಮ್ ಆಗಿರುವ ಅವಶ್ಯಕತೆ ಇಲ್ಲ. ಇದು ವಕ್ಫ್ ಆಡಳಿತವನ್ನು ಕಬಳಿಸಲು ಮಾಡಿದ ಸಂಚು.
ಪ್ರತಿಭಟನೆಯಲ್ಲಿ ಹಾಸನ ವಿಧಾನಸಭಾ ಕ್ಷೇತ್ರ ಸಮಿತಿಯ ಅಧ್ಯಕ್ಷರಾದ ಶಜೀಲ್ ಅಹ್ಮದ್ ಎಸ್ ಡಿ ಪಿ ಐ ಮುಖಂಡರಾದ ಫೈರೋಜ್ ಪಾಶ, ಸಫಿರ್,ಆಟೋ ಇರ್ಫಾನ್, ತನ್ವಿರ್ ಜೆಡಿಎಸ್ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷರಾದ ಸೈಯ್ಯದ್ ಅನ್ಸರ್, ಆಫಸರ್ ಪಾಶ, ಜಮೀಲ್ ಬೇಗ್ ಇತರರು ಉಪಸ್ಥಿತರಿದ್ದರು.
ವರದಿ: ರಾಜು ಅರಸೀಕೆರೆ