ಮೈಸೂರು: ಯುಗಾದಿ ಹಬ್ಬದ ಅಂಗವಾಗಿ ಹಸು ತೊಳೆಯಲು ಕೆರೆಗೆ ಹೋಗಿದ್ದ ಮೂವರು ನೀರು ಪಾಲಾಗಿರುವ ಘಟನೆ ನಂಜನಗೂಡು ತಾಲೂಕಿನ ಕಾಮಹಳ್ಳಿ ಗ್ರಾಮದಲ್ಲಿ ನಡೆದಿದೆ. ವಿನೋದ್ (17), ಬಸವೇಗೌಡ (45) ಮತ್ತು ಮುದ್ದೇಗೌಡ (48) ನೀರುಪಾಲಾದವರು.
ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಕಾಮಹಳ್ಳಿ ಗ್ರಾಮದ ಕೆರೆಯಲ್ಲಿ ಬೆಳಗ್ಗೆ 8.30 ಗಂಟೆಗೆ ಹಸು ತೊಳೆಯಲು ಹೋದ ವೇಳೆ ಅವಘಡ ಸಂಭವಿಸಿದೆ. ಘಟನೆ ಕುರಿತು ಮಾಹಿತಿ ತಿಳಿಯುತ್ತಿದ್ದಂತೆ ಗ್ರಾಮಸ್ಥರು ಮತ್ತು ಕುಟುಂಬಸ್ಥರು ಕೆರೆ ಬಳಿ ಜಮಾಯಿಸಿದ್ದಾರೆ. ಘಟನಾ ಸ್ಥಳದಲ್ಲಿ ಮೃತರ ಕುಟುಂಬಸ್ಥರಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ.
ಕೆರೆಯಲ್ಲಿ ನಾಪತ್ತೆಯಾಗಿರುವ ಮೂವರಿಗಾಗಿ ಅಗ್ನಿಶಾಮಕ ದಳದ ಸಿಬ್ಬಂದಿ ಶೋಧ ಕಾರ್ಯ ನಡೆಸಿದೆ. ಬಿಳಿಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.