ಬೆಂಗಳೂರು:ಹಣದ ಮೇಲೆ ರಾಜಕಾರಣವನ್ನು ನಾವು ಹಿಂದೆಯೇ ಮಾಡಿಲ್ಲ. ಮುಂದೆಯೂ ಮಾಡುವುದಿಲ್ಲ ಎಂದು ಕೇಂದ್ರ ಬೃಹತ್ ಕೈಗಾರಿಕಾ ಸಚಿವ ಎಚ್.ಡಿ. ಕುಮಾರಸ್ವಾಮಿ ಕಾಂಗ್ರೆಸ್ ನಾಯಕರಿಗೆ ತಿರುಗೇಟು ನೀಡಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ-ಜೆಡಿಎಸ್ ಮೈತ್ರಿ ಸುಭದ್ರವಾಗಿದ್ದು, ಸರ್ಕಾರಕ್ಕೆ ಛಾಟಿ ಬೀಸುವ ಕೆಲಸವನ್ನು ಮಾಡುತ್ತೇವೆ ಎಂದರು. ಎರಡು ಪಕ್ಷಗಳು ಒಗಟ್ಟಿನಿಂದ ಇದ್ದು ವಿಭಜಿಸಲು ಯಾರಿಂದಲೂ ಸಾಧ್ಯವಿಲ್ಲ. ಮಿತ್ರ ಪಕ್ಷಗಳರಡು ರಾಜ್ಯದಲ್ಲಿ ಒಳ್ಳೆಯ ಸರ್ಕಾರ ತರಲು ರಾಜ್ಯದ ಅಭಿವೃದ್ಧಿಗಾಗಿ ಕಾನೂನು ಹೋರಾಟ ಮಾಡುವುದರ ಜೊತೆಗೆ ರಾಜ್ಯಾದ್ಯಂತ ಸರ್ಕಾರದ ವೈಫಲ್ಯಗಳ ವಿರುದ್ಧ ಜನಜಾಗೃತಿ ಮೂಡಿಸುತ್ತೇವೆ ಎಂದು ಹೇಳಿದರು.
ಕರ್ನಾಟಕವು ಚಿನ್ನದಂತ ಸುಭೀಕ್ಷಾ ರಾಜ್ಯವಾಗಿದ್ದು, ಕಟ್ಟ ಆಡಳಿತ ನಡೆಸುತ್ತಿರುವ ಕಾಂಗ್ರೆಸ್‌ನಿಂದ ರಾಜ್ಯವನ್ನು ಉಳಿಸಬೇಕಿದೆ ಎಂದರು. ಆರ್‌ಸಿಬಿ ವಿಜಯೋತ್ಸವದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 11 ಅಮಾಯಕರು ಬಲಿಯಾದರು. ಪೊಲೀಸರ ಸಲಹೆಯನ್ನು ಧಿಕ್ಕರಿಸಿದ ಕಾಂಗ್ರೆಸ್ ಸರ್ಕಾರವೇ ದುರಂತಕ್ಕೆ ಕಾರಣ. ನಗರ ಪೊಲೀಸ್ ಆಯುಕ್ತ ದಯಾನಂದ್ ಅವರನ್ನು ಅಮಾನತು ಮಾಡಿರುವುದಕ್ಕೆ ಜನರೇ ವಿರೋಧ ಮಾಡುತ್ತಿದ್ದಾರೆ. ಅಮಾನತಿನ ನಾಟಕವಾಡಿರಬಹುದು ಎಂಬುದು ನನ್ನ ಅಭಿಪ್ರಾಯ ಎಂದರು.




