ಮಂಗಳೂರು: ಉದ್ಯಮಿಗೆ ಎಂಎಲ್ಎ ಸೀಟು ಕೊಡಿಸುವುದಾಗಿ ವಂಚಿಸಿರುವಂತ ಚೈತ್ರಾ ಕುಂದಾಪುರ ಕೇಸ್ ದಿನಕ್ಕೊಂದು ಟ್ವಿಸ್ಟ್ ಪಡೆಯುತ್ತಿದೆ. ಇದೇ ಸಂದರ್ಭದಲ್ಲಿ ನಮಗೂ ಆಕೆಯ ವ್ಯವಹಾರಕ್ಕೂ ಸಂಬಂಧವಿಲ್ಲ ಎಂಬುದಾಗಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಸ್ಪಷ್ಟ ಪಡಿಸಿದ್ದಾರೆ.
ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಚೈತ್ರಾ ಕುಂದಾಪುರ ಕೇಸ್ ನ ವ್ಯವಹಾರಕ್ಕೂ ನಮಗೂ ಸಂಬಂಧವಿಲ್ಲ. ಈ ಪ್ರಕರಣದಲ್ಲಿ ಸಮಗ್ರ ತನಿಖೆ ಆಗಬೇಕು, ಯಾರೇ ಇದ್ದರೂ ಉಗ್ರ ಶಿಕ್ಷೆ ಆಗಲಿ ಎಂದರು.
ಸ್ವಾಮೀಜಿ ಅಲ್ಲ, ಯಾರೇ ಇದ್ದರೂ ಅವರ ಬಂಧನ ಆಗಬೇಕು. ಟಕೆಟ್ ಕೊಡಿಸುತ್ತೇವೆ ಅಂತ ಹಣ ಪಡೆದಿರೋದನ್ನ ನಾವು ಗಂಭೀರವಾಗಿ ಪರಿಗಣಿಸ್ತೇವೆ. ಬಿಜೆಪಿಗೆ ಇದರಲ್ಲಿ ಯಾವುದೇ ಸಂಬಂಧ ಇಲ್ಲ ಎನ್ನುವುದು ಸ್ಪಷ್ಟ ಎಂದು ತಿಳಿಸಿದರು.
ಹೋರಾಟ ಹಲವರು ಮಾಡ್ತಾರೆ, ಹಾಗಂತ ಅದಕ್ಕೆಲ್ಲವಕ್ಕೂ ಪಕ್ಷಕ್ಕೆ ಸಂಬಂಧ ಇಲ್ಲ. ತನಿಖೆ ಆಗಲಿ, ದೊಡ್ಡ ದೊಡ್ಡ ಹೆಸರನ್ನು ಅಪರಾಧಿ ಸ್ಥಾನದಲ್ಲಿ ಇದ್ದವರು ಹೇಳುತ್ತಾರೆ. ಆದರೆ ತನಿಖೆ ಆಗಿ ಅದರ ಸತ್ಯ ಹೊರ ಬರಲಿ ಎಂದು ತಿಳಿಸಿದರು.