Ad imageAd image

ರಾಜ್ಯದ 9 ರೈಲ್ವೆ ಯೋಜನೆಗಳು 2 ವರ್ಷದಲ್ಲಿ ಪೂರ್ಣಗೊಳಿಸುತ್ತೇವೆ : ವಿ.ಸೋಮಣ್ಣ 

Bharath Vaibhav
WhatsApp Group Join Now
Telegram Group Join Now

ಬೆಂಗಳೂರು : ರಾಜ್ಯಕ್ಕೆ ಕೇಂದ್ರ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದ್ದು, ರಾಜ್ಯದಲ್ಲಿ ಕಳೆದ 30 ವರ್ಷಗಳಿಂದ ಬಾಕಿ ಉಳಿದ 9 ರೈಲ್ವೆ ಯೋಜನೆಗಳು 2 ವರ್ಷದಲ್ಲಿ ಪೂರ್ಣಗೊಳಿಸಲಾಗುವುದು ಎಂದು ರೈಲ್ವೆ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ ಹೇಳಿದ್ದಾರೆ.

ರಾಜ್ಯದ ರೈಲ್ವೆ ಸ್ಥಿತಿಗತಿ ಕುರಿತು ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕಳೆದ 30 ವರ್ಷಗಳಿಂದ ಬಾಕಿ ಉಳಿದ ಸುಮಾರು 1264 ಕಿಲೋ ಮೀಟರ್ ಒಳಗೊಂಡ 9 ರೈಲ್ವೆ ಯೋಜನೆ 2025 -26ರ ಅಂತ್ಯದೊಳಗೆ ಪೂರ್ಣಗೊಳಿಸಲಾಗುವುದು.

ಬೆಂಗಳೂರು ಉಪನಗರ ರೈಲು ಯೋಜನೆ ಕಾಮಗಾರಿ ಚುರುಕುಗೊಳಿಸಲು ಕರ್ನಾಟಕ ರೈಲ್ವೆ ಮೂಲಸೌಕರ್ಯ ಅಭಿವೃದ್ಧಿ ನಿಗಮಕ್ಕೆ ಮುಂದಿನ 15 ದಿನಗಳಲ್ಲಿ ವ್ಯವಸ್ಥಾಪಕ ನಿರ್ದೇಶಕ ಸ್ಥಾನಕ್ಕೆ ರೈಲ್ವೆ ತಾಂತ್ರಿಕ ತಜ್ಞರ ನೇಮಕಾತಿಗೆ ಕ್ರಮ ವಹಿಸುವುದಾಗಿ ತಿಳಿಸಿದ್ದಾರೆ.

ತುಮಕೂರು -ಕಲ್ಯಾಣದುರ್ಗ – ರಾಯದುರ್ಗ, ತುಮಕೂರು -ಚಿತ್ರದುರ್ಗ -ದಾವಣಗೆರೆ, ಗಿಣಿಗೇರಾ -ರಾಯಚೂರು, ಬಾಗಲಕೋಟ -ಕುಡಚಿ, ಗದಗ -ವಾಡಿ, ಕಡೂರು -ಚಿಕ್ಕಮಗಳೂರು, ಶಿವಮೊಗ್ಗ -ಶಿಕಾರಿಪುರ -ರಾಣೆಬೆನ್ನೂರು, ಬೆಳಗಾವಿ -ಕಿತ್ತೂರು -ಧಾರವಾಡ, ಹಾಸನ -ಬೇಲೂರು ಯೋಜನೆಗಳನ್ನು ಎರಡು ವರ್ಷದೊಳಗೆ ಪೂರ್ಣಗೊಳಿಸಲಾಗುತ್ತದೆ ಎಂದು ಹೇಳಿದ್ದಾರೆ.

 

 

WhatsApp Group Join Now
Telegram Group Join Now
Share This Article
error: Content is protected !!