—————————————ಕ್ರಿಕೆಟ್: ಪ್ರವಾಸಿ ವೆಸ್ಟ್ ಇಂಡೀಸ್ ವಿರುದ್ಧ ಮೊದಲ ಟೆಸ್ಟ್
ಅಹ್ಮದಾಬಾದ್: ಪ್ರವಾಸಿ ವೆಸ್ಟ್ ಇಂಡೀಸ್ ವಿರುದ್ಧ ಇಂದಿಲ್ಲಿ ಆರಂಭವಾದ ಮೊದಲ ಟೆಸ್ಟ್ ಕ್ರಿಕೆಟ್ ಪಂದ್ಯದ ಮೊದಲ ದಿನವೇ ಭಾರತ ತಂಡವು ವಿಂಡೀಸ್ ತಂಡವನ್ನು 162 ರನ್ ಗೆ ಆಲೌಟ್ ಮಾಡಲು ಯಶಸ್ವಿಯಾಯಿತು.

ಇಲ್ಲಿನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಇಂದು ಆರಂಭವಾದ ಟೆಸ್ಟ್ ಪಂದ್ಯದ ಮೊದಲ ದಿನ ವಿಂಡೀಸ್ ತಂಡವು ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಲು ನಿರ್ಧರಿಸಿತು. ಭಾರತದ ವೇಗದ ಬೌಲರುಗಳಾದ ಜಸ್ಪ್ರೀತ್ ಬೂಮ್ರಾ ಹಾಗೂ ಮೊಹ್ಮದ್ ಸಿರಾಜ್ ದಾಳಿಗೆ ತತ್ತರಿಸಿದ ಅನನುಭವಿ ವಿಂಡೀಸ್ ತಂಡವು ಅಲ್ಪ ಮೊತ್ತಕ್ಕೆ ಕುಸಿಯಿತು.
ಸ್ಕೋರ್ ವಿವರ
ವೆಸ್ಟ್ ಇಂಡೀಸ್ ಮೊದಲ ಇನ್ನಿಂಗ್ಸ್ 162
ಜಸ್ಟೀನ್ ಗ್ರೇವಿಸ್ 32 ( 48 ಎಸೆತ, 4 ಬೌಂಡರಿ)
ಮೊಹ್ಮದ್ ಸಿರಾಜ್ 40 ಕ್ಕೆ 4, ಬೂಮ್ರಾ 42 ಕ್ಕೆ 3, ಕುಲದೀಪ್ ಯಾದವ್ 25 ಕ್ಕೆ 2)




