Ad imageAd image
- Advertisement -  - Advertisement -  - Advertisement - 

ಇಂದಿನಿಂದ ಪಶ್ಚಿಮಘಟ್ಟ ಅರಣ್ಯ ಒತ್ತುವರಿ ತೆರವು ಕಾರ್ಯಚರಣೆ

Bharath Vaibhav
ಇಂದಿನಿಂದ ಪಶ್ಚಿಮಘಟ್ಟ ಅರಣ್ಯ ಒತ್ತುವರಿ ತೆರವು ಕಾರ್ಯಚರಣೆ
WhatsApp Group Join Now
Telegram Group Join Now

ಬೆಂಗಳೂರು: ಪಶ್ಚಿಮ ಘಟ್ಟ ಪ್ರದೇಶದಲ್ಲಿ ಅಕ್ರಮವಾಗಿ ತಲೆ ಎತ್ತಿರುವ ರೆಸಾರ್ಟ್, ಹೋಂ ಸ್ಟೇ ಸೇರಿ ಎಲ್ಲ ಮಾದರಿ ಅರಣ್ಯ ಒತ್ತುವರಿಗಳನ್ನು ತೆರೆವುಗೊಳಿಸಲು ಪಶ್ಚಿಮಘಟ್ಟ ಅರಣ್ಯ ಒತ್ತುವರಿ ತೆರವು ಕಾರ್ಯಪಡೆ ರಚಿಸಲಾಗಿದೆ.

ಸೋಮವಾರದಿಂದಲೇ ತೆರವು ಕಾರ್ಯಚರಣೆ ಆರಂಭಿಸಲಾಗುವುದು ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಘೋಷಣೆ ಮಾಡಿದ್ದಾರೆ.

ಮೊದಲು ದೊಡ್ಡ ಪ್ರಮಾಣದಲ್ಲಿ ಅರಣ್ಯ ಒತ್ತುವರಿ ಮಾಡಿ ನಿರ್ಮಿಸಿದ ಅಕ್ರಮ ರೆಸಾರ್ಟ್, ಹೋಂ ಸ್ಟೇ ಗಳು, ನಂತರ ತೋಟ, ಕಟ್ಟಡಗಳನ್ನು ತೆರವು ಮಾಡಲು ಸೂಚಿಸಲಾಗಿದೆ. ಕಾನೂನಿನ ಮುಂದೆ ಎಲ್ಲರೂ ಸಮಾನರು. ಪಶ್ಚಿಮಘಟ್ಟ ಒತ್ತುವರಿ ಮಾಡಿ ವಾಣಿಜ್ಯ ಚಟುವಟಿಕೆ ನಡೆಸುವವರಿಗೆ ಅವಕಾಶ ನೀಡುವುದಿಲ್ಲ ಎಂದು ಸಚಿವರು ತಿಳಿಸಿದ್ದಾರೆ.

ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಅರಣ್ಯ ಕಾರ್ಯಪಡೆ ಮುಖ್ಯಸ್ಥರ ನೇತೃತ್ವದಲ್ಲಿ ಪಶ್ಚಿಮ ಘಟ್ಟ ಅರಣ್ಯ ಒತ್ತುವರಿ ತೆರವು ಕಾರ್ಯಪಡೆ ರಚಿಸಲಾಗಿದೆ.

ಪಶ್ಚಿಮ ಘಟ್ಟ ಅರಣ್ಯದಲ್ಲಿ 2015ರ ನಂತರದ ಒತ್ತುವರಿಗೆ ಸಂಬಂಧಿಸಿದಂತೆ ಕರ್ನಾಟಕ ಅರಣ್ಯ ಕಾಯ್ದೆ ಶಿಕ್ಷೆ 64 ಎ ಅಡಿ ಪ್ರಕ್ರಿಯೆ ಪೂರ್ಣಗೊಂಡಿರುವ ಎಲ್ಲಾ ಪ್ರಕರಣಗಳಲ್ಲಿ ಕೂಡಲೇ ತೆರವು ಕಾರ್ಯಾಚರಣೆಗೆ ಸೂಚಿಸಲಾಗಿದೆ.

ಪಶ್ಚಿಮಘಟ್ಟ ಪ್ರದೇಶದಲ್ಲಿ ಅವೈಜ್ಞಾನಿಕವಾಗಿ ಗುಡ್ಡಗಳನ್ನು ಕಡಿದು ರಸ್ತೆ ಕಾಮಗಾರಿ ಮಾಡಿ ಗುಡ್ಡ ಕುಸಿತಕ್ಕೆ ಕಾರಣವಾದ ಇಂಜಿನಿಯರ್ ಗಳು, ಗುತ್ತಿಗೆದಾರರಿಗೆ ನೋಟಿಸ್ ನೀಡಿ ಕ್ರಮ ಜರುಗಿಸಲು ನಿರ್ದೇಶನ ನೀಡಲಾಗಿದೆ ಎಂದು ತಿಳಿಸಿದ್ದಾರೆ.

WhatsApp Group Join Now
Telegram Group Join Now
Share This Article
error: Content is protected !!