ಚಿಕ್ಕಬಳ್ಳಾಪುರ: ಮುಸ್ಲಿಂ ಯುವತಿ ಹಾಗೂ ಹಿಂದೂ ಯುವಕ ಪರಸ್ಪರ ಪ್ರೀತಿಸಿ ಇದೀಗ ಪೋಷಕರ ವಿರೋಧದ ನಡುವೆಯೂ ಪೊಲೀಸ್ ಠಾಣೆಯಲ್ಲಿ ಒಂದಾಗಿದ್ದಾರೆ. ಚಿಕ್ಕಬಳ್ಳಾಪುರ ತಾಲ್ಲೂಕಿನ ಮೈಲಪ್ಪನಹಳ್ಳಿ ಗ್ರಾಮದ ನಿವಾಸಿ 23 ವರ್ಷದ ಪಸೀಹಾ ಕಳೆದ 2 ವರ್ಷಗಳಿಂದ ತನ್ನ ಮನೆ ಎದುರಿನ ಹಿಂದೂ ಯುವಕ 24 ವರ್ಷದ ನಾಗಾರ್ಜುನನನ್ನು ಪ್ರೀತಿಸುತ್ತಿದ್ದಳು.
ವಾಟ್ಸಾಪ್ ಮೂಲಕ ಆರಂಭವಾಗಿ ಇವರ ಪ್ರೀತಿ, ಪ್ರೇಮ, ಪ್ರಣಯ ಕೊನೆಗೆ ಮದುವೆವರೆಗೂ ಬಂದಿದ್ದು, ಇದೀಗ ಅಂತಿಮವಾಗಿ ಜಾತಿ, ಧರ್ಮ ಬದಿಗಿಟ್ಟು ಪೋಷಕರ ವಿರೋಧದ ನಡುವೆಯೂ ಪೊಲೀಸ್ ಠಾಣೆಯಲ್ಲಿ ಒಂದಾಗಿದ್ದಾರೆ.
ಎದುರು ಬದುರು ಮನೆಯವರಾದ ಪಸೀಹಾ ಹಾಗೂ ನಾಗಾರ್ಜುನ ಕಳೆದ ಎರಡು ವರ್ಷಗಳಿಂದ ಪ್ರೀತಿಸುತ್ತಿದೆ. ಆದ್ರೆ, ಇವರಿಬ್ಬರ ಮದುವೆಗೆ ಮನೆಯಲ್ಲಿ ವಿರೋಧ ವ್ಯಕ್ತವಾಗಿದೆ. ಹೀಗಾಗಿ ಈ ಜೋಡಿ ಜೋಡಿ ಮನೆಬಿಟ್ಟು ಬಂದು ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್‍ಠಾಣೆ ಮೊರೆ ಹೋಗಿದ್ದರು. ಕೊನೆಗೆ ಇಬ್ಬರ ಪೋಷಕರು ಆಗಮಿಸಿ, ಇಬ್ಬರ ಪ್ರೀತಿಗೆ ವಿರೋಧ ವ್ಯಕ್ತಪಡಿಸಿದರೂ ಸಹ ಪಸೀಹಾ ಪ್ರೀತಿಸಿದವನ ಜೊತೆಯೇ ಬಾಳುವುದಾಗಿ ಹಠ ಹಿಡಿದು, ಕೊನೆಗೆ ನಾರ್ಗಾಜುನನ್ನು ವರಿಸಿದ್ದಾಳೆ.