Ad imageAd image

ಹಿಂದೂ ಧರ್ಮಕ್ಕೆ ಅವಮಾನ ಆಗುವ ರೀತಿ ವಾಟ್ಸಪ್ ಸ್ಟೇಟಸ್ : ಯುವಕ ಅರೆಸ್ಟ್ 

Bharath Vaibhav
ಹಿಂದೂ ಧರ್ಮಕ್ಕೆ ಅವಮಾನ ಆಗುವ ರೀತಿ ವಾಟ್ಸಪ್ ಸ್ಟೇಟಸ್ : ಯುವಕ ಅರೆಸ್ಟ್ 
WhatsApp Group Join Now
Telegram Group Join Now

ಹುಬ್ಬಳ್ಳಿ : ಹಿಂದೂ ಧರ್ಮಕ್ಕೆ ಅವಮಾನ ಆಗುವ ರೀತಿ ವಾಟ್ಸಪ್ ಸ್ಟೇಟಸ್ ನಲ್ಲಿ ವಿಡಿಯೋ ಹಾಕಿದವನನ್ನು ಹುಬ್ಬಳ್ಳಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಹಳೆ ಹುಬ್ಬಳ್ಳಿ ಪೊಲೀಸರಿಂದ ದಾದಾಪೀರ್ ಎನ್ನುವ ಆರೋಪಿಯನ್ನು ಅರೆಸ್ಟ್ ಮಾಡಿದ್ದಾರೆ.

ಹುಬ್ಬಳ್ಳಿ ನಗರದ ನೂರಾನಿ ಪ್ಲಾಟ್ ನಿವಾಸಿ ಆಗಿರುವ ದಾದಾಪೀರ್ ಆಟೋ ಚಾಲಕನಾಗಿ ಕೆಲಸ ಮಾಡುತ್ತಿದ್ದ ಪೊಲೀಸರು ಇದೀಗ ದಾದಾಪೀರ್ ವಿರುದ್ಧ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ.ಆರೋಪಿ ದಾದಾಪೀರ್ ನನ್ನು ವಶಕ್ಕೆ ಪಡೆದುಕೊಂಡು ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.

ಆರೋಪಿ ದಾದಪೀರ್ ಹಿಂದೂ ದೇವರು ಬಳಿ ಹೋಗಿ ಕಲ್ಮಾ ಹೇಳಿಕೊಟ್ಟ ಯುಟುಬರ್ ಒಬ್ಬನ ವಿಡಿಯೋವನ್ನ ತನ್ನ ಸ್ಟೇಟಸ್ ಗೆ ಹಾಕೊಂಡಿದ್ದ. ಹಿಂದೂ ಧರ್ಮಕ್ಕೆ ಅಪಮಾನ ಆಗೋ ರೀತಿ ಸ್ಟೇಟಸ್ ಹಾಕಿದ್ದಕ್ಕೆ ಆಕ್ರೋಶ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!