Ad imageAd image

ನೇಹಾ ಹಿರೇಮಠ ಅವರ ನಿವಾಸಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಶನಿವಾರ ಭೇಟಿ

Bharath Vaibhav
WhatsApp Group Join Now
Telegram Group Join Now

ಹುಬ್ಬಳ್ಳಿ : – * ಮೃತ ನೇಹಾ ಹಿರೇಮಠ ಕುಟುಂಬಕ್ಕೆ ಸಾಂತ್ವನ ಹೇಳಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
* ನೇಹಾ ಕುಟುಂಬದ ಜೊತೆ‌ ನಾವಿದ್ದೇವೆ ಎಂದ ಸಚಿವರು

ಹುಬ್ಬಳ್ಳಿ : ಇತ್ತೀಚೆಗೆ ಕೊಲೆಯಾದ ಹುಬ್ಬಳ್ಳಿಯ ಬಿಡ್ನಾಳದ ನೇಹಾ ಹಿರೇಮಠ ಅವರ ನಿವಾಸಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಶನಿವಾರ ಭೇಟಿ ನೀಡಿದರು. ನೇಹಾ ಹಿರೇಮಠ ತಂದೆ ನಿರಂಜನ್ ಹಾಗೂ ಕುಟುಂಬ ಸದಸ್ಯರಿಗೆ ಸಚಿವರು ಸಾಂತ್ವನ ಹೇಳಿದರು.

ಬಳಿಕ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ನೇಹಾ ಕುಟುಂಬಸ್ಥರ ದುಃಖದಲ್ಲಿ ನಾನು ಭಾಗಿಯಾಗಿದ್ದೇನೆ. ನೇಹಾ ಪಾಲಕರು ತಮ್ಮ ದುಃಖವನ್ನು ಹಂಚಿಕೊಂಡಿದ್ದಾರೆ‌. ದೊಡ್ಡ ಸಮಾಜ ನಾವೆಲ್ಲಾ ಜೊತೆಯಲ್ಲಿ ಇರ್ತೀವಿ ಅಂತ ಹೇಳಿದ್ದೇನೆ. ನಿಷ್ಪಕ್ಷಪಾತವಾಗಿ ತನಿಖೆ ನಡೆಯಲಿದೆ ಎಂದು ಸಚಿವರು ಹೇಳಿದರು ‌

ಇಂಥ ಘಟನೆ ನಡೆಯಬಾರದಿತ್ತು. ಇದನ್ನು ಕಠಿಣ‌ ಶಬ್ದದಿಂದ ಖಂಡಿಸುತ್ತೇನೆ. ಪ್ರಕರಣದ ತನಿಖೆ ಬಗ್ಗೆ ಯಾರಿಗೂ, ಯಾವುದೇ ಸಂಶಯ ಬೇಡ. ತನಿಖೆ ನಡೆಯಲಿದ್ದು, ನಾನೊಬ್ಬ ತಾಯಿಯಾಗಿ ಘಟನೆಯನ್ನು ಖಂಡಿಸುತ್ತೇನೆ ಎಂದು ಸಚಿವರು ಹೇಳಿದರು. ಇಂತಹ ಸಂದರ್ಭದಲ್ಲಿ‌ ಸಾಂತ್ವನ, ಸಮಾಧಾನ ಹೇಳಿದರೆ ಸಾಲದು. ಈ ವೇಳೆ ಯಾವುದೇ ರಾಜಕೀಯ ಮಾತುಗಳ ಬೇಡ ಎಂದು ಪತ್ರಕರ್ತರಲ್ಲಿ ಮನವಿ ಮಾಡಿದರು.

ಬೇರೆ ಯಾವ ವಿಷಯದ ಬಗ್ಗೆಯೂ ಮಾತನಾಡುವ ಸಂದರ್ಭ‌ ಇದಲ್ಲ. ಆ ಹೆಣ್ಣು ಮಗಳಿಗೆ ನ್ಯಾಯ ಕೊಡಿಸುವ ಜವಾಬ್ದಾರಿ ಇದೆ. ನಿರಂಜನ್ ಹಿರೇಮಠ ಅವರು ನಮ್ಮ ಪಕ್ಷದ ಕಾರ್ಪೊರೇಟರ್. ಅವರ ಜೊತೆಗೆ ನಾವಿದ್ದೇವೆ. ಅವರ ಮಗಳಿಗೆ ಸೂಕ್ತ ನ್ಯಾಯ ಕೊಡಿಸುವ ಪ್ರಾಮಾಣಿಕ ಪ್ರಯತ್ನ ಮಾಡಲಿದ್ದೇವೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.

ಈ ವೇಳೆ ಹುಬ್ಬಳ್ಳಿ ಪೊಲೀಸ್ ಆಯುಕ್ತರಾದ ರೇಣುಕಾ ಶಶಿಕುಮಾರ್, ಯುವ ಕಾಂಗ್ರೆಸ್ ಮುಖಂಡ ರಜತ್ ಉಳ್ಳಾಗಡ್ಡಿಮಠ, ಮಹಾನಗರ ಪಾಲಿಕೆ ವಿಪಕ್ಷ ನಾಯಕಿ ಸುವರ್ಣ ಕಲ್ಲಕುಂಟ್ಲ, ಮೋಹನ್ ಲಿಂಬಿಕಾಯಿ, ಬಂಗಾರೇಶ ಹಿರೇಮಠ, ರಾಜಶೇಖರ ಮೆಣಸಿನಕಾಯಿ ಸೇರಿದಂತೆ ಹಲವು ಮಂದಿ ಉಪಸ್ಥಿತರಿದ್ದರು.

ವರದಿ ಪ್ರತೀಕ ಚಿಟಗಿ

WhatsApp Group Join Now
Telegram Group Join Now
Share This Article
error: Content is protected !!