ಬಾದಾಮಿ: ಬಾದಾಮಿ ಮತಕ್ಷೇತ್ರದ ಬಾದಾಮಿ ಬಿಜೆಪಿ ಕಾರ್ಯಾಲಯದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಸಲುವಾಗಿ ಹಮ್ಮಿಕೊಂಡಿದ್ದ ಮಹಿಳೆಯರ ಆರ್ಥಿಕ ಸಬಲೀಕರಣ ಹಾಗೂ ಅಂಗಾಂಗ ದಾನಿಗಳ ನೋಂದಣಿ ಕಾರ್ಯಕ್ರಮದಲ್ಲಿ ಭಾರತೀಯ ಜನತಾ ಪಾರ್ಟಿ ಬಾಗಲಕೋಟೆ ಜಿಲ್ಲಾಧ್ಯಕ್ಷರಾದ ಶಾಂತಗೌಡ. ಟಿ. ಪಾಟೀಲ ಪಾಲ್ಗೊಂಡು ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಶುಭಾಶಯಗಳನ್ನು ಕೋರಿದರು. ಮಹಿಳೆಯರು ಸಂಸಾರವನ್ನು ನಡೆಸುವುದಷ್ಟೇ ಅಲ್ಲದೇ ಎಲ್ಲ ಕ್ಷೇತ್ರಗಳಲ್ಲಿ ಕಾರ್ಯ ನಿರ್ವಹಿಸಲು ಸಶಕ್ತರಾಗಿದ್ದಾರೆ ಎಂದು ಮಹಿಳಾ ಶಕ್ತಿಯ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿದರು.
ಇದೇ ಸಂದರ್ಭದಲ್ಲಿ ಬಿಜೆಪಿ ರಾಜ್ಯ ಉಪಾಧ್ಯಕ್ಷರಾದ ಶ್ರೀಮತಿ ವಿಜಯಲಕ್ಸ್ಮಿ ತುಂಗಳ, ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಶ್ರೀಮತಿ ಸುಮೆದಾ ಮಾನೆ, ಶ್ರೀಮತಿ ಭಾಗ್ಯ ಉದ್ನೂರ, ಶ್ರೀಮತಿ ವೈಷ್ಣವಿ ಬಾಗೇವಾಡಿ,ಮಂಡಲ ಮಹಿಳಾ ಮೋರ್ಚ ಅಧ್ಯಕ್ಷೆ ಶ್ರೀಮತಿ ಸವಿತಾ ಉಂಕಿ, ಬಾದಾಮಿ ತಾಲೂಕಾ ಮಂಡಲ ಅಧ್ಯಕ್ಷರಾದ ನಾಗರಾಜ ಕಾಚಟ್ಟಿ, ಮುತ್ತು ಉಳ್ಳಾಗಡ್ಡಿ ಹಾಗೂ ಮಹಿಳೆಯರು ಉಪಸ್ಥಿತರಿದ್ದರು.
ವರದಿ:- ರಾಜೇಶ್. ಎಸ್. ದೇಸಾಯಿ ಬಾಗಲಕೋಟೆ




