ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ವಿಕೃತಿ ಕಾಮಿಗಳ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದೆ. ಇದೀಗ ಆ ಸಾಲಿಗೆ ಮತ್ತೊಂದು ಉದಾಹರಣೆ ಸೇರಿದ್ದು, ಮಹಿಳೆಯರು ಸ್ನಾನ ಮಾಡೋದನ್ನ ಕದ್ದು ವಿಡಿಯೋ ಮಾಡ್ತಿದ್ದ ಕಾಮಿಯ ಬಂಧನವಾಗಿದೆ.
ಹಾಜ ಮೊಯಿನುದ್ದಿನ್ ಬಂಧಿತ ಆರೋಪಿಯಾಗಿದ್ದಾನೆ. ವೃತ್ತಿಯಲ್ಲಿ ಎಲೆಕ್ಟ್ರಿಕಲ್ ಕೆಲಸ ಮಾಡಿಕೊಂಡಿದ್ದ ಚನ್ನಸಂದ್ರ ಮೂಲದ ಮೊಯಿನುದ್ದಿನ್, ಮಹಿಳೆಯರು ಸ್ನಾನ ಮಾಡೋದನ್ನ ಕದ್ದು ಮುಚ್ಚಿ ಮೊಬೈಲ್‌ನಲ್ಲಿ ವಿಡಿಯೋ ಮಾಡೋದನ್ನೇ ಕಾಯಕ ಮಾಡಿಕೊಂಡಿದ್ದ ಎನ್ನಲಾಗಿದೆ.
ಕಾಡುಗೋಡಿ ಠಾಣಾ ವ್ಯಾಪ್ತಿಯಲ್ಲಿರುವ ಮನೆಯೊಂದರಲ್ಲಿ ತಾಯಿ-ಮಗಳು ಬಾತ್‌ರೂಮ್‌ಗೆ ಸ್ನಾನಕ್ಕೆ ಹೋದಾಗ ಈತ ಕದ್ದು ವಿಡಿಯೋ ಮಾಡೋಕೆ ಪ್ರಯತ್ನಪಟ್ಟಿದ್ದನು. ಈ ಬಗ್ಗೆ ಪ್ರಕರಣ ದಾಖಲಾಗಿತ್ತು. ಪೊಲೀಸರು ಕಾಮುಕನನ್ನ ಬಂಧಿಸಿ ಜೈಲಿಗಟ್ಟಿದ್ದಾರೆ.
ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದ ವಿಡಿಯೋವನ್ನೂ ಡಿಲೀಟ್ ಮಾಡಿದ್ದಾರೆ .ವೃತ್ತಿಯಲ್ಲಿ ಎಲೆಕ್ಟ್ರಿಕಲ್ ಕೆಲಸ ಮಾಡಿಕೊಂಡಿದ್ದ ಚನ್ನಸಂದ್ರ ಮೂಲದ ಮೊಯಿನುದ್ದಿನ್, ಮಹಿಳೆಯರು ಸ್ನಾನ ಮಾಡೋದನ್ನ ಕದ್ದು ಮುಚ್ಚಿ ಮೊಬೈಲ್‌ನಲ್ಲಿ ವಿಡಿಯೋ ಮಾಡೋದನ್ನೇ ಕಾಯಕ ಮಾಡಿಕೊಂಡಿದ್ದ ಎನ್ನಲಾಗಿದೆ.
ಕಾಡುಗೋಡಿ ಠಾಣಾ ವ್ಯಾಪ್ತಿಯಲ್ಲಿರುವ ಮನೆಯೊಂದರಲ್ಲಿ ತಾಯಿ-ಮಗಳು ಬಾತ್‌ರೂಮ್‌ಗೆ ಸ್ನಾನಕ್ಕೆ ಹೋದಾಗ ಈತ ಕದ್ದು ವಿಡಿಯೋ ಮಾಡೋಕೆ ಪ್ರಯತ್ನಪಟ್ಟಿದ್ದನು. ಈ ಬಗ್ಗೆ ಪ್ರಕರಣ ದಾಖಲಾಗಿತ್ತು. ಪೊಲೀಸರು ಕಾಮುಕನನ್ನ ಬಂಧಿಸಿ ಜೈಲಿಗಟ್ಟಿದ್ದಾರೆ. ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದ ವಿಡಿಯೋವನ್ನೂ ಡಿಲೀಟ್ ಮಾಡಿದ್ದಾರೆ.




