ಕೋಲ್ಕತ್ತಾ: ಮಮತಾ ಬ್ಯಾನರ್ಜಿ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ ಅದರಂತೆ ಬಾರ್‌ಗಳಲ್ಲಿ ಕೆಲಸ ಮಾಡಲು ಮಹಿಳೆಯರಿಗೂ ಅವಕಾಶ ನೀಡುವ ಮಸೂದೆಗೆ ಪಶ್ಚಿಮ ಬಂಗಾಳ ವಿಧಾನಸಭೆ ಬುಧವಾರ ಅನುಮೋದನೆ ನೀಡಿದೆ.
ಬುಧವಾರ ವಿಧಾನಸಭೆಯಲ್ಲಿ ಪಶ್ಚಿಮ ಬಂಗಾಳ ಹಣಕಾಸು ಮಸೂದೆ 2025 ಅನ್ನು ಮಂಡಿಸಿದ ರಾಜ್ಯ ಸಚಿವ ಚಂದ್ರಮಾ ಭಟ್ಟಾಚಾರ್ಯ ಅವರು ಪುರುಷ ಮತ್ತು ಮಹಿಳೆ ಎಂಬ ತಾರತಮ್ಯಕ್ಕೆ ರಾಜ್ಯ ಸರ್ಕಾರದಲ್ಲಿ ನಂಬಿಕೆ ಇಲ್ಲ ಎಂದು ಹೇಳಿದರು.
ಈ ವೇಳೆ ಈ ಮಸೂದೆಗೆ ಅನುಮೋದನೆ ದೊರೆತಿದ್ದು ಇದರೊಂದಿಗೆ ಇನ್ನು ಮುಂದೆ ಮಹಿಳೆಯರು ‘ಆನ್ ಕ್ಯಾಟಗರಿ’ ಮದ್ಯದ ಅಂಗಡಿಗಳಲ್ಲಿ ಕೆಲಸ ಮಾಡಬಹುದಾಗಿದೆ.
ಹೊರ ದೇಶಗಳ ಬಾರ್ ಮತ್ತು ರೆಸ್ಟೋರೆಂಟ್‌ಗಳ ಕೌಂಟರ್‌ನಲ್ಲಿ ಮಹಿಳೆಯರೂ ಇದ್ದಾರೆ. ಆದರೆ ಬಂಗಾಳದಲ್ಲಿ ಈವರೆಗೆ ಆ ನಿಯಮ ಇರಲಿಲ್ಲ. ಆದರೆ ಈಗ ಅದು ಬದಲಾಗಿದೆ. ಬಾ-ಕಮ್-ರೆಸ್ಟೋರೆಂಟ್, ಮದ್ಯದ ಅಂಗಡಿಗಳಲ್ಲಿ ಉದ್ಯೋಗಕ್ಕಾಗಿ ಹೊಸ ನಿಯಮಗಳನ್ನು ಪರಿಚಯಿಸಲಾಗಿದೆ. ಆದುದರಿಂದ ಇನ್ನು ಮುಂದಿನ ದಿನಗಳಲ್ಲಿ ‘ಆನ್ ಕ್ಯಾಟಗರಿ’ ಮದ್ಯದ ಅಂಗಡಿಗಳಲ್ಲಿ ಮಹಿಳೆಯರು ಕೆಲಸ ಮಾಡಬಹುದು.