Ad imageAd image

ಯಡಿಯೂರಪ್ಪ ವಿರುದ್ಧದ ಪೋಕ್ಸೋ ಪ್ರಕರಣದ ಸಮಗ್ರ ತನಿಖೆಗೆ ಮಹಿಳಾ ಆಯೋಗ ಪತ್ರ 

Bharath Vaibhav
ಯಡಿಯೂರಪ್ಪ ವಿರುದ್ಧದ ಪೋಕ್ಸೋ ಪ್ರಕರಣದ ಸಮಗ್ರ ತನಿಖೆಗೆ ಮಹಿಳಾ ಆಯೋಗ ಪತ್ರ 
bsy
WhatsApp Group Join Now
Telegram Group Join Now

ಬೆಂಗಳೂರು : ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ಯಡಿಯೂರಪ್ಪ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣವನ್ನು ಸಮಗ್ರ ತನಿಖೆಗೆ ಒಳಪಡಿಸುವಂತೆ ಕೋರಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಪೊಲೀಸ್ ಇಲಾಖೆಗೆ ಪತ್ರ ಬರೆದಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿದ ನಾಗಲಕ್ಷ್ಮಿ ಚೌಧರಿ ಮಹಿಳೆಯ ಸಾವು ಅನುಮಾನಾಸ್ಪದವಾಗಿದೆ. ಪ್ರಕರಣದ ವಿಚಾರಣೆ ನಡೆಯವಾಗಲೇ ಮಹಿಳೆ ಸಾವನ್ನಪ್ಪಿದ್ದಾರೆ. ಪ್ರಕರಣವನ್ನು ಮರು ತನಿಖೆ ಮಾಡಬೇಕೆಂದು ಆಗ್ರಹಿಸಿದ್ದಾರೆ.

ಮಾಜಿ ಸಿಎಂ ಯಡಿಯೂರಪ್ಪ ನನ್ನ 17 ವರ್ಷದ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ಮಹಿಳೆಯೊಬ್ಬರು ದೂರು ನೀಡಿದ್ದರು.

ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ ನೀಡಿದ ಆರೋಪದಡಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ವಿರುದ್ಧ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು. ನಂತರ ಈ ಪ್ರಕರಣವನ್ನು ಸರ್ಕಾರ ಸಿಐಡಿಗೆ ವಹಿಸಿತ್ತು.

ಪೋಕ್ಸೋ ಕೇಸ್ ನಲ್ಲಿ ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆಯಾಗಿದ್ದ ಹಿನ್ನೆಲೆಯಲ್ಲಿ ಪ್ರಕರಣ ರದ್ದು ಕೋರಿ ಯಡಿಯೂರಪ್ಪ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್ ಬಿಎಸ್ ವೈ ಅವರನ್ನು ಬಂಧನ ಮಾಡದಂತೆ ಆದೇಶ ಹೊರಡಿಸಿತ್ತು.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!