ಬ್ರಿಸ್ಟೋಲ್: ಭಾರತ ವನಿತೆಯರ ಕ್ರಿಕೆಟ್ ತಂಡವು ಆತಿಥೇಯ ಇಂಗ್ಲೆಂಡ್ ವಿರುದ್ಧ ಇಲ್ಲಿ ನಡೆದ ಎರಡನೇ ಟ್ವೆಂಟಿ-20 ಕ್ರಿಕೆಟ್ ಪಂದ್ಯದಲ್ಲಿ 24 ರನ್ ಗಳಿಂದ ಗೆದ್ದುಕೊಂಡಿದೆ.
ಇಲ್ಲಿನ ಕೌಂಟಿ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ ಮಹಿಳೆಯರ ತಂಡ 4 ವಿಕೆಟ್ ಗೆ 181 ರನ್ ಗಳಿಸಿತು. ಇಂಗ್ಲೆಂಡ್ ಮಹಿಳೆಯರು 7 ವಿಕೆಟ್ ಗೆ 157 ರನ್ ಗಳನ್ನು ಮಾತ್ರ ಗಳಿಸಿತು.




