ಗುವಾಹಟಿ: ಮಹಿಳೆಯರ ಏಕದಿನ ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿ ಇಂದಿನಿಂದ ಆರಂಭವಾಗುತ್ತಿದ್ದು, ಭಾರತ ಕ್ರಿಕೆಟ್ ತಂಡವು ಶ್ರೀಲಂಕಾ ತಂಡವನ್ನು ಎದುರಿಸಲಿದೆ.
ಬರಸ್ಪರಾ ಕ್ರಿಕೆಟ್ ಕ್ರೀಡಾಂಗಣದಲ್ಲಿ ಇಂದು ಮಧ್ಯಾಹ್ನ 3 ಗಂಟೆಗೆ ಪಂದ್ಯ ಆರಂಭವಾಗಲಿದೆ. ಭಾರತ ಈಚೆಗೆ ಮುಗಿದ ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯಲ್ಲಿ ಉತ್ತಮ ಸಾಧನೆ ತೋರಿದ್ದು, ಅಲ್ಲದೇ ಪುರುಷರ ತಂಡದಂತೆ ಮಹಿಳಾ ತಂಡವು ಸದೃಢ ತಂಡವಾಗಿದ್ದು, ಪಂದ್ಯಾವಳಿಯ ಫೆವರಿಟ್ ತಂಡಗಳಲ್ಲಿ ಒಂದಾಗಿದೆ.




