Join The Telegram | Join The WhatsApp |
ಸವದತ್ತಿ ತಾಲೂಕ ಪಂಚಾಯತ ಸಭಾಭವನದಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಐಇಸಿ ಚಟುವಟಿಕೆಯಡಿ ಕಾಯಕ ಬಂಧುಗಳಿಗಾಗಿ ಹಮ್ಮಿಕೊಂಡಿರುವ “ಮೇಟ್-ಮೇಳ” ಕಾರ್ಯಕ್ರಮಕ್ಕೆ ಸೋಮವಾರ ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳಾದ ಯಶವಂತಕುಮಾರ ಸಸಿಗೆ ನೀರು ಹಾಕುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿದರು.
ಬಳಿಕ ಮಾತನಾಡಿದ ಅವರು ಪ್ರತಿಯೊಬ್ಬ ಕಾಯಕ ಬಂಧು ಕನಿಷ್ಠ 40ಕ್ಕೂ ಹೆಚ್ಚು ಜನ ಕೂಲಿಕಾರರನ್ನು ಕೆಲಸಕ್ಕೆ ಕರೆತಂದು ಗ್ರಾಮ ಪಂಚಾಯತಿಯಲ್ಲಿ ಮಾನವ ದಿನಗಳನ್ನು ಸೃಜನೆ ಮಾಡಿಸಿ ಶಾಶ್ವತ ವಾಗಿರುವ ಆಸ್ತಿಗಳನ್ನು ಸೃಜನೆ ಮಾಡಬೇಕು. ದುಡಿಯಲು ಬೇರೆ ಊರುಗಳಿಗೆ ಗುಳೆ ಹೋಗುವುದನ್ನು ತಪ್ಪಿಸಲು ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ದುಡಿಯುವ ಕೈಗಳಿಗೆ ಕೆಲಸ ನೀಡಲಾಗುತ್ತಿದೆ ಹಾಗೂ ಕೃಷಿಹೊಂಡ, ದನದ ಶೆಡ್, ಕುರಿ. ಮೆಕ್ಕೆ ಸಾಕಾಣಿಕೆಗಾಗಿ ಶೆಡ್ ಗಳ ನಿರ್ಮಾಣ ಸೇರಿದಂತೆ ಹಲವು ವೈಯಕ್ತಿಕ ಕಾಮಗಾರಿಗಳನ್ನು ನರೇಗಾ ಯೋಜನೆಯಡ ಕೈಗೊಳ್ಳಲು ಅವಕಾಶವಿದೆ. ಹಾಗಾಗಿ ಎಲ್ಲ ಕೂಲಿಕಾರರು ಈ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು. ಮನರೇಗಾ ಯೋಜನೆಯಡಿ ಕೈಗೊಂಡ ಪ್ರತಿಯೊಂದು ಸಮುದಾಯ ಕಾಮಗಾರಿಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಕಾರ್ಮಿಕರ ಹಾಜರಾತಿಯನ್ನು ಕಡ್ಡಾಯವಾಗಿ ಎನ್ ಎಮ್ ಎಮ್ ಎಸ್ ಮೂಲಕ ದಾಖಲಿಸಬೇಕು ಎಂದು ಕಾಯಕ ಬಂಧುಗಳಿಗೆ ತಿಳಿಸಿದರು.
ಬಳಿಕ ತಾಪಂ ಸಹಾಯಕ ನಿರ್ದೇಶಕರಾದ (ಗ್ರಾ.ಉ) ಸಂಗನಗೌಡ ಹಂದ್ರಾಳ ಮಾತನಾಡಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಮೂಲಕ ಗ್ರಾಮಗಳು ಅಭಿವೃದ್ದಿಯಾಗುತ್ತಿದ್ದು ಮನರೇಗಾ ಕೂಲಿಕಾರರ ಶ್ರಮದಿಂದ ತಾಲೂಕಿನಲ್ಲಿ ಹೊಸ ಕೆರೆ, ಶಾಲಾಭಿವೃದ್ಧಿ ಕಾಮಗಾರಿಗಳು ಮತ್ತು ವೈಯಕ್ತಿಕ ಕಾಮಗಾರಿಗಳನ್ನು ಪಡೆದುಕೊಳ್ಳುವುದರಿಂದ ಗ್ರಾಮೀಣ ಭಾಗದಲ್ಲಿ ಆಸ್ತಿಗಳ ಸೃಜನೆ ಮಾಡುವಂತಾಗಿದೆ. ಒಂದು ಕುಟುಂಬಕ್ಕೆ ಒಂದು ಉದ್ಯೋಗ ಚೀಟಿಯನ್ನು ನೀಡಿ ಪ್ರತಿ ಒಂದು ಉದ್ಯೋಗ ಚೀಟಿಗೆ ವರ್ಷಕ್ಕೆ 100 ದಿನ ಕೆಲಸವನ್ನು ನೀಡಲಾಗುತ್ತಿದೆ ಹಾಗೂ ಪುರುಷರಿಗೆ ಮತ್ತು ಮಹಿಳೆಯರಿಗೆ ಸಮಾನ ಕೆಲಸ ನೀಡಿ ಸಮಾನ ಕೂಲಿಯನ್ನು ನೀಡಲಾಗುತ್ತಿದೆ. ಆದುದರಿಂದ ಪ್ರತಿಯೊಬ್ಬರು ಕೂಲಿ ಕೆಲಸ ಮಾಡಿ ಆರ್ಥಿಕ ಮಟ್ಟ ಹೆಚ್ಚಿಸಕೊಳ್ಳಬೇಕು ಎಂದು ತಿಳಿಸಿದರು. ಮತ್ತು ಕಾಯಕ ಬಂಧು ನಿರ್ವಹಿಸಬೇಕಾದ ಕರ್ತವ್ಯಗಳನ್ನು ತಿಳಿಸಿದರು.
ಈ ಸಂದರ್ಭದಲ್ಲಿ ತಾಪಂ ವಿಷಯ ನಿರ್ವಾಹಕ ಎಂ ಸಿ ಕಂಬಿ, ತಾಪಂ ತಾಂತ್ರಿಕ ಸಂಯೋಜಕ ಮಹಾದೇವ ಕಾಮನ್ನವರ, ತಾಪಂ ಎಂಐಎಸ್ ಸಂಯೋಜಕ ನಾಗರಾಜ ಬೆಹರೆ, ತಾಪಂ ಐಇಸಿ ಸಂಯೋಜಕ ಮಲೀಕಜಾನ ಮೋಮಿನ, ಗ್ರಾಮ ಕಾಯಕ ಮಿತ್ರರು, ಬಿಎಫ್ ಟಿಗಳು ಮತ್ತು ಕಾಯಕ ಬಂಧುಗಳು ಉಪಸ್ಥಿತರಿದ್ದರು. ವಿಷಯ ನಿರ್ವಾಹಕ ಎಂ ಸಿ ಕಂಬಿ ನಿರೂಪಿಸಿದರು, ಐಇಸಿ ಸಂಯೋಜಕ ಮಲೀಕಜಾನ ಮೋಮಿನ ವಂದಿಸಿದರು.
Join The Telegram | Join The WhatsApp |