ಯಳಂದೂರು:-ತಾಲ್ಲೂಕಿನ ಯರಿಯೂರು ಗ್ರಾಮದ ಉನ್ನತಿಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಗಿಡಗಳನ್ನು ನೆಡುವುದರ ಮೂಲಕ ಆಚರಣೆ ಮಾಡಲಾಯಿತು.ಈ ವೇಳೆ ಶಾಲಾ ಶಿಕ್ಷಕರು, ವಿದ್ಯಾರ್ಥಿ ಗಳು 30 ಹೆಚ್ಚು ಗಿಡಗಳನ್ನು ಶಾಲಾ ಆವರಣದಲ್ಲಿ ನೆಟ್ಟು ಪರಿಸರ ಸಂರಕ್ಷಣೆ ಬಗ್ಗೆ ಜಾಗೃತಿ ಮೂಡಿಸಿದರು..
ನಂತರ ಶಿಕ್ಷಕರಾದ ಬಸವಣ್ಣ ರವರು ಮಾತನಾಡಿ ಸುತ್ತಮುತ್ತಲಿನ ಪರಿಸರವನ್ನು ಸಂರಕ್ಷಿಸುವುದು ಎಲ್ಲರ ಕರ್ತವ್ಯವಾಗಿದೆ. ಪರಿಸರವನ್ನು ಉಳಿಸಿದರೆ ಮಾತ್ರ ನಮಗೆ ಆರೋಗ್ಯವಾದ ಜೀವನ ನಡೆಸಲು ಸಾಧ್ಯ,
ವಿದ್ಯಾರ್ಥಿ ಜೀವನದಿಂದಲೇ ಪರಿಸರ ಸಂರಕ್ಷಣೆ ಬಗ್ಗೆ ಕಾಳಜಿ ವಹಿಸಬೇಕು, ವಿದ್ಯಾರ್ಥಿಗಳು ಕನಿಷ್ಠ ಒಂದು ಗಿಡವನ್ನು ನೆಟ್ಟು ಬೆಳೆಸಬೇಕಾಗಿದೆ, ನಶಿಸಿ ಹೋಗುತ್ತಿರುವ ನಮ್ಮ ಪರಿಸರವನ್ನು ಉಳಿಸಿ, ಬೆಳೆಸಬೇಕಾಗಿರುವುದು ಎಲ್ಲರ ಜವಬ್ದಾರಿಯಾಗಿದೆ, ಶಾಲೆಯ ಪರಿಸರವನ್ನು ಶುಚಿತ್ವದಿಂಡುವುದು ವಿದ್ಯಾರ್ಥಿಗಳು ಕರ್ತವ್ಯವಾಗಿದೆ, ಶಾಲೆಯಲ್ಲಿ ವಿದ್ಯಾರ್ಥಿಗಳು ತಮ್ಮ ನೆನಪಿಗಾಗಿ ಗಿಡವನ್ನು ನೆಟ್ಟು ಬೆಳೆಸಬೇಕು, ನಮ್ಮ ಸುತ್ತಲಿನ ಪರಿಸರವನ್ನು ಸಂರಕ್ಷಿಸಿ, ವಿದ್ಯಾರ್ಥಿ ಜೀವನದಿಂದಲೇ ಪರಿಸರ ಪ್ರೇಮವನ್ನು ಮೈಗೂಡಿಸಿಕೊಳ್ಳಬೇಕೆಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ದೈಹಿಕ ಶಿಕ್ಷಕರಾದ ಜಿ.ಮಹದೇವ್,ಶಿಕ್ಷಕರಾದ ಸುರೇಶ್, ಉಮಾಯಸ್ಮ, ನಿರ್ಮಲ ರಾಣಿ, ಮಂಜುಳಾ, ಮಮತಾ ಹಾಗೂ ವಿದ್ಯರ್ಥಿಗಳು ಹಾಜರಿದ್ದರು..
ವರದಿ :ಸ್ವಾಮಿ ಬಳೇಪೇಟೆ