ತುರುವೇಕೆರೆ: ಸ್ಥಳೀಯ ಪಟ್ಟಣ ಪಂಚಾಯ್ತಿಯಲ್ಲಿ ವಿಶ್ವ ಮಹಿಳಾ ದಿನಾಚರಣೆಯನ್ನು ಇಂದು ಆಚರಿಸಲಾಯಿತು.
ಪಪಂ ಅಧ್ಯಕ್ಷೆ ಸ್ವಪ್ನ ನಟೇಶ್ ಮಾತನಾಡಿ, ಕುಟುಂಬ ನಿರ್ವಹಣೆಯಿಂದ ಹಿಡಿದು ದೇಶದ ಚುಕ್ಕಾಣಿ ಹಿಡಿದು ಸಮರ್ಥವಾಗಿ ಆಡಳಿತ ನಡೆಸುವವರೆಗೂ ಮಹಿಳೆ ತನ್ನ ಆಧಿಪತ್ಯ ಸಾಧಿಸಿದ್ದಾಳೆ. ಪುರುಷರಷ್ಟೇ ಮಹಿಳೆಯೂ ಇಂದು ಎಲ್ಲಾ ಕ್ಷೇತ್ರಗಳಲ್ಲೂ ಸಾಧಿಸಿದ್ದಾರೆ. ಮಹಿಳೆ ಅಬಲೆಯಲ್ಲ ಸಬಲೆ ಎಂಬುದನ್ನು ವಿಶ್ವಕ್ಕೆ ಸಾರಿದ್ದಾರೆ ಎಂದರು.
ಈ ಸಂದರ್ಭದಲ್ಲಿ ಸಮಾಜ ಸೇವಕಿ ರೆಹನಾ ಬೇಗಂ, ಸಂಗೀತ ಶಿಕ್ಷಕಿ ತೇಜಸ್ವಿನಿ ಅವರನ್ನು ಸನ್ಮಾನಿಸಲಾಯಿತು. ಪಪಂ ಉಪಾಧ್ಯಕ್ಷೆ ಭಾಗ್ಯಮ್ಮ, ಸದಸ್ಯರಾದ ಎನ್.ಆರ್.ಸುರೇಶ್, ಅಂಜನ್ ಕುಮಾರ್, ಪ್ರಭಾಕರ್, ಚಿದಾನಂದ್, ಯಜಮಾನ್ ಮಹೇಶ್, ರುದ್ರೇಶ್, ಜಯಮ್ಮ, ಶೀಲಾಶಿವಪ್ಪನಾಯಕ, ಮುಖ್ಯಾಧಿಕಾರಿ ಶ್ರೀನಾಥ್ ಬಾಬು, ಇಂಜಿನಿಯರ್ ಹರೀಶ್, ಕಂದಾಯ ನಿರೀಕ್ಷಕ ಪ್ರಶಾಂತ್, ಅಧಿಕಾರಿಗಳಾದ ಸದಾನಂದ್, ನರಸಿಂಹಮೂರ್ತಿ, ಕೃಷ್ಣಮೂರ್ತಿ, ಫಾತಿಮಾ ಸೇರಿದಂತೆ ಪಪಂಯ ಮಹಿಳಾ ಸಿಬ್ಬಂದಿಗಳು, ಪೌರಕಾರ್ಮಿಕರು ಉಪಸ್ಥಿತರಿದ್ದರು.
ವರದಿ: ಗಿರೀಶ್ ಕೆ ಭಟ್, ತುರುವೇಕೆರೆ