ಬಾಗಲಕೋಟೆ : ಹುನಗುಂದ ತಾಲೂಕಿನ ಧನ್ನೂರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಇದ್ದಲಗಿ ಗ್ರಾಮದಲ್ಲಿ ನರೇಗಾ ಕೂಲಿ ಕಾರ್ಮಿಕರೊಂದಿಗೆ ವಿಶ್ವ ಮಹಿಳಾ ದಿನಾಚರಣೆ ಮಾಡಲಾಯಿತು.
ಕಾರ್ಯಕ್ರಮದಲ್ಲಿ ನರೇಗಾ ಕೂಲಿ ಕಾರ್ಮಿಕರಿಗೆ ರಂಗೋಲಿ ಸ್ಪರ್ಧೆ ಏರ್ಪಡಿಸಲಾಗಿತ್ತು. ಉತ್ತಮವಾಗಿ ರಂಗೋಲಿ ಬಿಡಿಸಿದ ಕೂಲಿ ಕಾರ್ಮಿಕರಿಗೆ ಪ್ರಥಮ, ದ್ವಿತೀಯ, ತೃತೀಯ ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಯಿತು. ಬಳಿಕ ಕೇಕ್ ಕತ್ತರಿಸುವ ಮೂಲಕ ವಿಶ್ವ ಮಹಿಳಾ ದಿನಾಚರಣೆ ಆಚರಿಸಲಾಯಿತು.
ಈ ವೇಳೆ ಮಾತನಾಡಿದ ಐಇಸಿ ಸಂಯೋಜಕ ಬಸವರಾಜ ಕೊಪ್ಪದ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಏಕೀಕೃತ ಸಹಾಯವಾಣಿ 8277506000 ಬಗ್ಗೆ ಮಾಹಿತಿ ನೀಡಿದರು. ಜೊತೆಗೆ ನರೇಗಾ ಯೋಜನೆಯಡಿ ಸಿಗುತ್ತಿರುವ ವ್ಯಯಕ್ತಿಕ ಕಾಮಗಾರಿಗಳು ಹಾಗೂ ಸೌಲಭ್ಯಗಳ ಕುರಿತು ಸವಿವರವಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ಐಇಸಿ ಸಂಯೋಜಕ ಬಸವರಾಜ ಕೊಪ್ಪದ , ಬಿಎಫ್ ಟಿ ಸಂಗಪ್ಪ ಮೇಲಿನಮನಿ, ಬ್ರಹ್ಮಲಿಂಗೇಶ್ ಅಂತರಗೊಂಡ, ಕಾಯಕಮಿತ್ರ ಆಸ್ಮಾಬೇಗಂ ನಿಡಗುಂದಿ , ಕಾಯಕ ಬಂಧುಗಳು, ಗ್ರಾಮ ಪಂಚಾಯಿತಿ ಸದಸ್ಯರು ಉಪಸ್ಥಿತರಿದ್ದರು.