ಕೊಪ್ಪಳ: ರಾಜ್ಯದಲ್ಲಿ 2023ರ ವಿಧಾನಸಭಾ ಚುನಾವಣೆಗೂ ಮುನ್ನ ಕಾಂಗ್ರೆಸ್ ನೀಡಿದ ಭರವಸೆ ಮತ್ತು ಆಶ್ವಾಸನೆ ಮತ್ತೊಮ್ಮೆ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವಂತೆ ಮಾಡಿದೆ.
ಇದ್ರಲ್ಲಿ ದೊಡ್ಡ ಪಾತ್ರ ನಿರ್ವಹಿಸಿದ್ದು ಅಂದ್ರೆ ಅದು ಕಾಂಗ್ರೆಸ್ ಬಿಡುಗಡೆ ಮಾಡಿದ್ದ ಗ್ಯಾರೆಂಟಿ ಯೋಜನೆಗಳು. ಇದೇ ಕಾರಣಕ್ಕೆ ರಾಜ್ಯದ ಜನ ಕಾಂಗ್ರೆಸ್ ಪಕ್ಷಕ್ಕೆ ಬರೋಬ್ಬರಿ 136 ಶಾಸಕರನ್ನು ಗೆಲ್ಲಿಸುವ ಮೂಲಕ ಗೆಲ್ಲುವ ಮೂಲಕ ದೊಡ್ಡ ಬಹುಮತ ನೀಡಿತ್ತು. ಕಾಂಗ್ರೆಸ್ ಹೇಳಿಕೊಂಡಂತೆ ಗ್ಗ್ಯಾರೆಂಟಿ ಯೋಜನೆಗಳನ್ನು ಜಾರಿಗೆ ತಂದಿದೆ.
ಕಾಂಗ್ರೆಸ್ ಸರ್ಕಾರ ಸಂಪೂರ್ಣ ದುಡ್ಡನ್ನು ಕೇವಲ ಗ್ಯಾರೆಂಟಿ ಯೋಜನೆಗಳಿಗೆ ವ್ಯವ ಮಾಡುತ್ತಿದ್ದು ಚುನಾವಣೆಗೂ ಮುನ್ನ ನೀಡಿದ್ದ ಆಶ್ವಾಸನೆಯಂತೆ ಪಂಚ ಗ್ಯಾರಂಟಿಗಳನ್ನು ನೀಡಿದೆ.ಈ ಮಧ್ಯೆ ಈ ಸ್ವಪಕ್ಷದ ಶಾಸಕರುಗಳು ಗ್ಯಾರಂಟಿ ಯೋಜನೆಗಳ ವಿರುದ್ಧ ಅಪಸ್ವರ ಎತ್ತಿದ್ದಾರೆ.
ಈ ಬಗ್ಗೆ ಮಾತನಾಡಿದ ಕಾಂಗ್ರೆಸ್ ಹಿರಿಯ ಶಾಸಕ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ, ಹಳ್ಳಿಗಳಿಗೆ ರಸ್ತೆ ಬೇಕಾ..? ಹಾಗಾದ್ರೆ ಗ್ಯಾರಂಟಿ ಬೇಡ ಎಂದು ಬರೆದುಕೊಡಿ ಎಂದು ಹೇಳುವ ಮೂಲಕ ಗ್ಯಾರಂಟಿ ಯೋಜನೆಯಿಂದ ಅಭಿವೃದ್ಧಿ ಕುಂಠಿತವಾಗುತ್ತಿದೆ ಎಂಬ ಪರೋಕ್ಷ ಸುಳಿವು ನೀಡಿದ್ದಾರೆ.
ಸಿಎಂ ಸಿದ್ದರಾಮಯ್ಯ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಮಾತನಾಡುವಾಗ ಕೆಲ ಗ್ರಾಮಸ್ಥರ ಜೊತೆ ಮಾತನಾಡುವ ವೇಳೆ, ಜನರು ನಮ್ಮೂರಿಗೆ ರಸ್ತೆ ಬೇಕೆಂದು ಧ್ವನಿ ಎತ್ತಿದ್ದರು.
ಈ ವೇಳೆ ಮಾತನಾಡಿದ ರಾಯರೆಡ್ಡಿ ರೈತನಿಗೆ ಗ್ಯಾರಂಟಿಗೆ ಹೆಚ್ಚು ದುಡ್ಡು ಕೊಡುತ್ತೇವೆ. ರಸ್ತೆ ಬೇಕಾದರೆ ಗ್ಯಾರಂಟಿ ಬೇಡ ಎಂದು ಬರೆದುಕೊಡಿ ಎಂದು ತಮಾಷೆಯಾಗಿ ಹೇಳಿಕೆ ನೀಡಿದ್ದಾರೆ. ಆದ್ರೆ ರಾಜಕೀಯವಾಗಿ ಈ ವಿಚಾರ ತೀವ್ರ ಚರ್ಚೆಗೆ ಗ್ರಾಸವಾಗಿದೆ.